Monday, August 8, 2022

Latest Posts

ವಿಜಯಪುರ ಜಿಲ್ಲೆಯಲ್ಲಿ ಕೊರೋನಾಗೆ ಮತ್ತಿಬ್ಬರು ಸಾವು

ವಿಜಯಪುರ: ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಮತ್ತೆ ಇಬ್ಬರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಹೇಳಿದ್ದಾರೆ.
ಜಿಲ್ಲೆಯ ಬಸವನಬಾಗೇವಾಡಿಯ 61 ವರ್ಷದ (ಪಿ 94732) ವೃದ್ಧೆ, ಕಳೆದ 8 ವರ್ಷಗಳಿಂದ ರಕ್ತದೊತ್ತಡ ಕಾಯಿಲೆಗಳಿಂದ ಬಳಲಿ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅಲ್ಲದೆ ಜಿಲ್ಲೆಯ ಅಗಸನಾಳದ 64 ವರ್ಷದ ವೃದ್ಧ (ಪಿ 94796) ಸಾವಿಗೀಡಾಗಿದ್ದಾರೆ. ಇವರು ರಕ್ತದೊತ್ತಡ ಕಾಯಿಲೆಯಿಂದ ಬಳಲುತ್ತಿದ್ದರು. ಇವರಿಬ್ಬರ ಅಂತ್ಯ ಸಂಸ್ಕಾರವನ್ನು ಶಿಷ್ಠಾಚಾರದಂತೆ ನೆರವೇರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss