Sunday, June 26, 2022

Latest Posts

ವಿಜಯಪುರ ಜಿಲ್ಲೆಯಲ್ಲಿ ಗುರುವಾರ 10 ಮಂದಿಗೆ ಕೊರೋನಾ ದೃಢ, 28 ಮಂದಿ ಗುಣಮುಖ

ಹೊಸ ದಿಗಂತ ವರದಿ, ವಿಜಯಪುರ:

ಜಿಲ್ಲೆಯಲ್ಲಿ ಗುರುವಾರ 10 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 13,691 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲಕುಮಾರ ಹೇಳಿದರು.
ಈ ಕುರಿತು ಮಾಹಿತಿ ನೀಡಿದ ಅವರು, ಜಿಲ್ಲೆಯಲ್ಲಿ ಕೊರೋನಾಗೆ ಇಲ್ಲಿವರೆಗೆ 200 ಜನರು ಅಸುನೀಗಿದ್ದಾರೆ. ಇಂದು ಮತ್ತೆ 28 ರೋಗಿಗಳು ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈವರೆಗೆ 13,333 ರೋಗಿಗಳು ಗುಣಮುಖಗೊಂಡು ಮನೆಗೆ ತೆರಳಿದ್ದಾರೆ. ಇನ್ನೂ 158 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss