Tuesday, July 5, 2022

Latest Posts

ವಿಜಯಪುರ ಜಿಲ್ಲೆಯಲ್ಲಿ ಗುರುವಾರ 63 ಮಂದಿಗೆ ಕೊರೋನಾ ದೃಢ, 55 ಮಂದಿ ಗುಣಮುಖ

ವಿಜಯಪುರ: ಜಿಲ್ಲೆಯಲ್ಲಿ ಗುರುವಾರ 63 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಮೂರು ಜನ ಮೃತಪಟ್ಟಿರುವುದು ಸೇರಿದಂತೆ ಸೋಂಕಿತರ ಸಂಖ್ಯೆ 7570 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಹೇಳಿದರು.
ಈ ಕುರಿತು ಮಾಹಿತಿ ನೀಡಿದ ಅವರು, ಜಿಲ್ಲೆಯಲ್ಲಿ ಕೊರೋನಾಗೆ ಮತ್ತೆ ಮೂವರು ಸಾವಿಗೀಡಾಗಿದ್ದು, ಈವರೆಗೆ 130 ಜನರು ಮೃತಪಟ್ಟಿದ್ದಾರೆ. ಇಂದು ಮತ್ತೆ 55 ರೋಗಿಗಳು ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇಲ್ಲಿವರೆಗೆ 6786 ರೋಗಿಗಳು ಗುಣಮುಖಗೊಂಡು ಮನೆಗೆ ತೆರಳಿದ್ದಾರೆ. ಇನ್ನೂ 654 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss