Saturday, August 13, 2022

Latest Posts

ವಿಜಯಪುರ ಜಿಲ್ಲೆಯಲ್ಲಿ ಗುರುವಾರ 107 ಮಂದಿಗೆ ಕೊರೋನಾ ದೃಢ, 74 ಮಂದಿ ಗುಣಮುಖ

ವಿಜಯಪುರ: ಜಿಲ್ಲೆಯಲ್ಲಿ ಗುರುವಾರ 107 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಇಬ್ಬರು ಸಾವಿಗೀಡಾಗಿರುವುದು ಸೇರಿದಂತೆ ಸೋಂಕಿತರ ಸಂಖ್ಯೆ 8279 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲಕುಮಾರ ಹೇಳಿದರು.
ಈ ಕುರಿತು ಮಾಹಿತಿ ನೀಡಿದ ಅವರು, ಜಿಲ್ಲೆಯಲ್ಲಿ ಕೊರೋನಾಗೆ ಮತ್ತೆ ಇಬ್ಬರು ಮೃತಪಟ್ಟಿದ್ದು, ಈವರೆಗೆ 142 ಜನರು ಸಾವಿಗೀಡಾಗಿದ್ದಾರೆ. ಇಂದು ಮತ್ತೆ 74 ರೋಗಿಗಳು ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇಲ್ಲಿವರೆಗೆ 7333 ರೋಗಿಗಳು ಗುಣಮುಖಗೊಂಡು ಮನೆಗೆ ತೆರಳಿದ್ದಾರೆ. ಇನ್ನೂ 804 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss