Monday, July 4, 2022

Latest Posts

ವಿಜಯಪುರ ಜಿಲ್ಲೆಯಲ್ಲಿ ಬುಧವಾರ 28 ಮಂದಿಗೆ ಕೋವಿಡ್ ದೃಢ, ಸೋಂಕಿತರು 427 ಕ್ಕೆ ಏರಿಕೆ

ವಿಜಯಪುರ: ಜಿಲ್ಲೆಯಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಬುಧವಾರ ಮತ್ತೆ 28 ಜನರಲ್ಲಿ ಸೋಂಕು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 427 ಕ್ಕೆ ಏರಿಕೆಯಾಗಿದೆ.
ಕೆಲ ದಿನಗಳಿಂದ ಸೋಂಕಿತ ಪ್ರಕರಣಗಳು ಹೆಚ್ಚಳಗೊಳುತ್ತಿರುವುದು ಆತಂಕಕ್ಕೆ ಎಡೆಮಾಡಿದ್ದು, ಇಲ್ಲಿವರೆಗೆ ಸೋಂಕಿಗೆ 9 ಜನರು ಮೃತಪಟ್ಟಿದ್ದಾರೆ. ಇಂದು 9 ವರ್ಷದ ಬಾಲಕ, ಬಾಲಕಿ ಸೇರಿದಂತೆ ಒಟ್ಟು 28 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಮತ್ತೆ 3 ಜನರು ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಇಲ್ಲಿವರೆಗೆ 308 ಜನರು ಗುಣಮುಖರಾಗಿದ್ದಾರೆ. ಇನ್ನುಳಿದ ಸೋಂಕಿತರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss