Monday, July 4, 2022

Latest Posts

ವಿಜಯಪುರ ಜಿಲ್ಲೆಯಲ್ಲಿ ಮಂಗಳವಾರ 9 ಮಂದಿಗೆ ಕೊರೋನಾ ದೃಢ, 22 ಮಂದಿ ಗುಣಮುಖ

ಹೊಸ ದಿಗಂತ ವರದಿ, ವಿಜಯಪುರ:

ವಿಜಯಪುರ ಜಿಲ್ಲೆಯಲ್ಲಿ ಮಂಗಳವಾರ 9 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 14,259 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಹೇಳಿದರು.
ಈ ಕುರಿತು ಮಾಹಿತಿ ನೀಡಿದ ಅವರು, ಜಿಲ್ಲೆಯಲ್ಲಿ ಕೊರೋನಾಗೆ ಇಲ್ಲಿವರೆಗೆ 205 ಜನರು ಅಸುನೀಗಿದ್ದಾರೆ. ಇಂದು ಮತ್ತೆ 22 ರೋಗಿಗಳು ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಈವರೆಗೆ 13,977 ರೋಗಿಗಳು ಗುಣಮುಖಗೊಂಡು ಮನೆಗೆ ತೆರಳಿದ್ದಾರೆ. ಇನ್ನೂ 77 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss