ವಿಜಯಪುರ: ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಮೂರು ಸಾವಿರ ಗಡಿ ದಾಟಿದ್ದು, ಶನಿವಾರ ಮತ್ತೆ 129 ಮಂದಿಯಲ್ಲಿ ಸೋಂಕು ದೃಢಪಟ್ಟರೆ, ಸೋಂಕಿತರ ಸಂಖ್ಯೆ 3019 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಕೊರೋನಾ ಪ್ರಕರಣ ಹೆಚ್ಚಳಗೊಳ್ಳುವುದರ ಜೊತೆಗೆ, ಸೋಂಕಿಗೆ ಮೃತಪಟ್ಟವರ ಸಂಖ್ಯೆಯೂ ಏರಿಕೆಯಾಗುತ್ತಿದ್ದು, ಇಂದು 90 ವರ್ಷದ ಮತ್ತೊಬ್ಬ ವೃದ್ಧ (ಪಿ 120201) ಕೊರೋನಾಗೆ ಸಾವಿಗೀಡಾಗಿದ್ದು, ಈವರೆಗೆ ಮೃತಪಟ್ಟವರ ಸಂಖ್ಯೆ 35 ಕ್ಕೆ ಏರಿಕೆಯಾಗಿದೆ.
ಶನಿವಾರ ಮತ್ತೆ 55 ರೋಗಿಗಳು ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಇಲ್ಲಿವರೆಗೆ 2116 ರೋಗಿಗಳು ಗುಣಮುಖಗೊಂಡು ಮನೆಗೆ ತೆರಳಿದ್ದಾರೆ. ಇನ್ನೂ 868 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ.