Monday, August 8, 2022

Latest Posts

ವಿಜಯಪುರ ಜಿಲ್ಲೆಯಲ್ಲಿ ಶನಿವಾರ 140 ಮಂದಿಗೆ ಕೊರೋನಾ ದೃಢ, 86 ಮಂದಿ ಗುಣಮುಖ

ವಿಜಯಪುರ: ಜಿಲ್ಲೆಯಲ್ಲಿ ಶನಿವಾರ 140 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಮತ್ತೆ ನಾಲ್ವರು ಮೃತಪಟ್ಟಿರುವುದು ಸೇರಿದಂತೆ ಸೋಂಕಿತರ ಸಂಖ್ಯೆ 6472 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಹೇಳಿದರು.
ಈ ಕುರಿತು ಮಾಹಿತಿ ನೀಡಿದ ಅವರು, ಜಿಲ್ಲೆಯಲ್ಲಿ 54 ವರ್ಷದ ವ್ಯಕ್ತಿ (ಪಿ 80099), 70 ವರ್ಷದ ವೃದ್ಧೆ (ಪಿ 97464), 57 ವರ್ಷದ ವ್ಯಕ್ತಿ (ಪಿ 211695), 57 ವರ್ಷದ ವ್ಯಕ್ತಿ (ಪಿ 156880) ಸೇರಿದಂತೆ ನಾಲ್ಕು ಜನರು ಮೃತಪಟ್ಟಿದ್ದು, ಇಲ್ಲಿವರೆಗೆ ಕೊರೋನಾಗೆ 99 ಜನರು ಅಸುನೀಗಿದ್ದಾರೆ. ಇಂದು ಮತ್ತೆ 86 ರೋಗಿಗಳು ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈವರೆಗೆ 5517 ರೋಗಿಗಳು ಗುಣಮುಖಗೊಂಡು ಮನೆಗೆ ತೆರಳಿದ್ದಾರೆ. ಇನ್ನೂ 856 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss