Sunday, June 26, 2022

Latest Posts

ವಿಜಯಪುರ ಜಿಲ್ಲೆಯಲ್ಲಿ ಶುಕ್ರವಾರ 94 ಮಂದಿಗೆ ಕೊರೋನಾ ದೃಢ, 96 ಮಂದಿ ಗುಣಮುಖ

ವಿಜಯಪುರ: ಜಿಲ್ಲೆಯಲ್ಲಿ ಶುಕ್ರವಾರ 94 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಇಬ್ಬರು ಮೃತಪಟ್ಟಿರುವುದು ಸೇರಿದಂತೆ ಸೋಂಕಿತರ ಸಂಖ್ಯೆ 7664 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲಕುಮಾರ ಹೇಳಿದರು.
ಈ ಕುರಿತು ಮಾಹಿತಿ ನೀಡಿದ ಅವರು, ಜಿಲ್ಲೆಯಲ್ಲಿ ಕೊರೋನಾಗೆ ಮತ್ತಿಬ್ಬರು ಸಾವಿಗೀಡಾಗಿದ್ದು, ಈವರೆಗೆ 132 ಜನರು ಮೃತಪಟ್ಟಿದ್ದಾರೆ. ಇಂದು ಮತ್ತೆ 96 ರೋಗಿಗಳು ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇಲ್ಲಿವರೆಗೆ 6882 ರೋಗಿಗಳು ಗುಣಮುಖಗೊಂಡು ಮನೆಗೆ ತೆರಳಿದ್ದಾರೆ. ಇನ್ನೂ 656 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss