Friday, August 19, 2022

Latest Posts

ವಿಜಯಪುರ ಜಿಲ್ಲೆಯಲ್ಲಿ ಸೋಮವಾರ 92 ಮಂದಿಗೆ ಕೊರೋನಾ ದೃಢ, 9 ಮಂದಿ ಗುಣಮುಖ, ಇಬ್ಬರು ಸಾವು

ವಿಜಯಪುರ: ಜಿಲ್ಲೆಯಲ್ಲಿ ಸೋಮವಾರ ಮತ್ತೆ 92 ಮಂದಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 3224 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲಕುಮಾರ ಹೇಳಿದರು.
ಈ ಕುರಿತು ಮಾಹಿತಿ ನೀಡಿದ ಅವರು, ತೀವ್ರ ಉಸಿರಾಟ ಸಮಸ್ಯೆ ಸೇರಿದಂತೆ ನಾನಾ ಕಾಯಿಲೆಯಿಂದ ಬಳಲುತ್ತಿದ್ದ 74 ವರ್ಷದ ವೃದ್ಧೆ (ಪಿ 105949) ಹಾಗೂ 70 ವರ್ಷದ ವೃದ್ಧ (ಪಿ 119371) ಕೊರೋನಾ ಸೋಂಕಿಗೆ ಮೃತಪಟ್ಟಿದ್ದು, ಈವರೆಗೆ 38 ಜನರು ಸಾವಿಗೀಡಾಗಿದ್ದಾರೆ. ಇಂದು ಮತ್ತೆ 9 ರೋಗಿಗಳು ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಇಲ್ಲಿವರೆಗೆ 2193 ರೋಗಿಗಳು ಗುಣಮುಖಗೊಂಡು ಮನೆಗೆ ತೆರಳಿದ್ದಾರೆ. ಇನ್ನೂ 993 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!