Sunday, August 14, 2022

Latest Posts

ವಿಜಯಪುರ ಜಿಲ್ಲೆಯಲ್ಲಿ ಸೋಮವಾರ 87 ಮಂದಿಗೆ ಕೊರೋನಾ ದೃಢ, 112 ಮಂದಿ ಗುಣಮುಖ

ವಿಜಯಪುರ: ಜಿಲ್ಲೆಯಲ್ಲಿ ಸೋಮವಾರ 87 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಮತ್ತೆ ಮೂವರು ಸಾವಿಗೀಡಾಗಿರುವುದು ಸೇರಿದಂತೆ ಸೋಂಕಿತರ ಸಂಖ್ಯೆ 6676 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲಕುಮಾರ ಹೇಳಿದರು.
ಈ ಕುರಿತು ಮಾಹಿತಿ ನೀಡಿದ ಅವರು, ಜಿಲ್ಲೆಯಲ್ಲಿ ಕೊರೋನಾಗೆ ಮೂರು ಜನರು ಮೃತಪಟ್ಟಿದ್ದು, ಈವರೆಗೆ ಕೊರೋನಾಗೆ ಸಾವಿಗೀಡಾದವರ ಸಂಖ್ಯೆ 106 ಕ್ಕೆ ಏರಿಕೆಯಾಗಿದೆ. ಇಂದು ಮತ್ತೆ 112 ರೋಗಿಗಳು ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಇಲ್ಲಿವರೆಗೆ 5825 ರೋಗಿಗಳು ಗುಣಮುಖಗೊಂಡು ಮನೆಗೆ ತೆರಳಿದ್ದಾರೆ. ಇನ್ನೂ 745 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss