Thursday, July 7, 2022

Latest Posts

ವಿಜಯಪುರ ಜಿಲ್ಲೆಯಲ್ಲಿ ಸೋಮವಾರ 134 ಮಂದಿಗೆ ಕೊರೋನಾ ದೃಢ, 82 ಮಂದಿ ಗುಣಮುಖ

ವಿಜಯಪುರ: ಜಿಲ್ಲೆಯಲ್ಲಿ ಸೋಮವಾರ 134 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಮತ್ತೊರ್ವ ವ್ಯಕ್ತಿ ಮೃತಪಟ್ಟಿರುವುದು ಸೇರಿದಂತೆ ಸೋಂಕಿತರ ಸಂಖ್ಯೆ 10,195 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲಕುಮಾರ ಹೇಳಿದರು.
ಈ ಕುರಿತು ಮಾಹಿತಿ ನೀಡಿದ ಅವರು, ಜಿಲ್ಲೆಯಲ್ಲಿ ಕೊರೋನಾಗೆ 53 ವರ್ಷದ ವ್ಯಕ್ತಿ (ಪಿ. 494834) ಸಾವಿಗೀಡಾಗಿದ್ದು, ಇಲ್ಲಿವರೆಗೆ 167 ಜನರು ಮೃತಪಟ್ಟಿದ್ದಾರೆ. ಇಂದು ಮತ್ತೆ 82 ರೋಗಿಗಳು ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಈವರೆಗೆ 9025 ರೋಗಿಗಳು ಗುಣಮುಖಗೊಂಡು ಮನೆಗೆ ತೆರಳಿದ್ದಾರೆ. ಇನ್ನೂ 1002 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss