Monday, July 4, 2022

Latest Posts

ವಿಜಯಪುರ ಜಿಲ್ಲೆಯಲ್ಲಿ 48 ಮಂದಿಗೆ ಕೊರೋನಾ ದೃಢ, 73 ಮಂದಿ ಗುಣಮುಖ

ವಿಜಯಪುರ: ಜಿಲ್ಲೆಯಲ್ಲಿ ಮಂಗಳವಾರ 48 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಇಬ್ಬರು ಮೃತಪಟ್ಟಿರುವುದು ಸೇರಿದಂತೆ ಸೋಂಕಿತರ ಸಂಖ್ಯೆ 7437 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲಕುಮಾರ ಹೇಳಿದರು.
ಈ ಕುರಿತು ಮಾಹಿತಿ ನೀಡಿದ ಅವರು, ಜಿಲ್ಲೆಯಲ್ಲಿ ಕೊರೋನಾಗೆ ಮತ್ತಿಬ್ಬರು ಸಾವಿಗೀಡಾಗಿದ್ದು, ಈವರೆಗೆ 125 ಜನರು ಅಸುನೀಗಿದ್ದಾರೆ. ಇಂದು ಮತ್ತೆ 73 ರೋಗಿಗಳು ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇಲ್ಲಿವರೆಗೆ 6710 ರೋಗಿಗಳು ಗುಣಮುಖಗೊಂಡು ಮನೆಗೆ ತೆರಳಿದ್ದಾರೆ. ಇನ್ನೂ 602 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದರು

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss