ವಿಜಯಪುರ: ಕೊರೋನಾ ವಿಷಮ ಸ್ಥಿತಿಯಲ್ಲೂ ದ್ವಿತೀಯ ಪಿಯು ಇಂಗ್ಲಿಷ್ ಪರೀಕ್ಷೆ ಗುರುವಾರ ನಗರ ಸೇರಿದಂತೆ ಸುಸೂತ್ರವಾಗಿ ನಡೆದು, ಮುಕ್ತಾಯಗೊಂಡಿದೆ.
ಜಿಲ್ಲೆ ಹಾಗೂ ನಗರದ ಪರೀಕ್ಷಾ ಕೇಂದ್ರದಲ್ಲಿ ಬೆಳಗ್ಗೆ 8 ಗಂಟೆಯಿಂದಲೇ ಕೊರೋನಾ ಮುನ್ನೆಚ್ಚರಿಕೆಯಾಗಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡು, ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷಾರ್ಥಿಗಳನ್ನು ಸ್ಯಾನಿಟೈಜರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ಮಾಡಿ, ಪರೀಕ್ಷಾ ಕೊಠಡಿಗಳಿಗೆ ಕಳುಹಿಸಿಲಾಗಿದೆ.
ಪರೀಕ್ಷಾ ಕೊಠಡಿಗಳಲ್ಲಿ ವಿದ್ಯಾರ್ಥಿಗಳನ್ನು ಜಿಗ್ಜಾಗ್ ಮಾದರಿಯಲ್ಲಿ ಕೂಡಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆಯನ್ನು ನಡೆಸಲಾಗಿದೆ. ದ್ವಿತೀಯ ಪಿಯು ಪರೀಕ್ಷೆಗೆ ಒಟ್ಟು 23,562 ವಿದ್ಯಾರ್ಥಿಗಳ ಪೈಕಿ 22,086 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಒಟ್ಟು 1476 ವಿದ್ಯಾರ್ಥಿಗಳು ಗೈರು ಆಗಿದ್ದಾರೆ ಎಂದು ಪಿಯು ಬೋರ್ಡ್ ಜಿಲ್ಲಾ ಉಪ ನಿರ್ದೇಶಕ ಆರ್.ಎ. ಜಾಹಗೀರದಾರ ಅವರು ತಿಳಿಸಿದ್ದಾರೆ.