ವಿಜಯಪುರ: ಜಿಲ್ಲೆಯಲ್ಲಿ ಮೂರು ವರ್ಷದ ಬಾಲಕನಿಗೆ ಸೇರಿದಂತೆ ಶುಕ್ರವಾರ ನಾಲ್ವರಲ್ಲಿ ಸೋಂಕು ದೃಢಪಟ್ಟಿದ್ದು, ಐವರು ಮೃತಪಟ್ಟಿರುವುದು ಸೇರಿದಂತೆ ಸೋಂಕಿತರ ಸಂಖ್ಯೆ 85 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಹೇಳಿದರು.
ಈ ಕುರಿತು ಮಾಹಿತಿ ನೀಡಿದ ಅವರು, ಮಹಾರಾಷ್ಟ್ರದಿಂದ ಆಗಮಿಸಿದ ಕಾರ್ಮಿಕರಾದ ರೋಗಿ ಸಂಖ್ಯೆ 2712ರ 26 ವರ್ಷದ ವ್ಯಕ್ತಿ, ರೋಗಿ ಸಂಖ್ಯೆ 2713ರ 3 ವರ್ಷದ ಬಾಲಕ, ರೋಗಿ ಸಂಖ್ಯೆ 2714ರ 30 ವರ್ಷದ ವ್ಯಕ್ತಿ ಹಾಗೂ ರೋಗಿ ಸಂಖ್ಯೆ 2715ರ 28 ವರ್ಷದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದ್ದು, ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿನಿಂದ ಬಳಲುತ್ತಿದ್ದವರಲ್ಲಿ 53 ರೋಗಿಗಳು ಗುಣಮುಖಗೊಂಡು ಬಿಡುಗಡೆಯಾಗಿದ್ದು, ಇನ್ನುಳಿದ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದರು.