Tuesday, June 28, 2022

Latest Posts

ವಿಜಯಪುರ| ಪಿಯು ಪರೀಕ್ಷೆಯಲ್ಲಿ ಅನುತ್ತೀರ್ಣ: ವಿದ್ಯಾರ್ಥಿ ಆತ್ಮಹತ್ಯೆ

ವಿಜಯಪುರ: ದ್ವಿತೀಯ ಪಿಯು ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದಕ್ಕೆ ಮನನೊಂದು ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಬುಧವಾರ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಖುಶಾಲ್ ಹುಲಕಂಟೆಪ್ಪ ಕಲ್ಲೂರ (17) ಎಂದು ಗುರುತಿಸಲಾಗಿದೆ.
ಖುಶಾಲ್ ಕಲ್ಲೂರ ಈತನು ಪಟ್ಟಣದ ಎಚ್.ಜಿ. ಪದವಿಪೂರ್ವ ಕಾಲೇಜ್‌ನಲ್ಲಿ ಓದುತ್ತಿದ್ದ, ಪಿಯು ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿರುವುದನ್ನೆ ಮಾನಸಿಕ ಮಾಡಿಕೊಂಡು, ಪಟ್ಟಣದ ಹೊರ ವಲಯದ ಗಿಡವೊಂದಕ್ಕೆ ನೇಣು ಬಿಗಿದುಕೊಂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಸಂಬಂಧ ಸಿಂದಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss