Wednesday, July 6, 2022

Latest Posts

ವಿಜಯಪುರ| ಭಾನುವಾರದ ಕರ್ಫ್ಯೂ ಸಡಲಿಕೆ: ಡಿಸಿ ವೈ.ಎಸ್. ಪಾಟೀಲ

ವಿಜಯಪುರ: ಸಾರ್ವಜನಿಕರ ಕೋರಿಕೆಯ ಹಿನ್ನೆಲೆಯಲ್ಲಿ ಭಾನುವಾರ ಪೂರ್ಣ ದಿನದ ಲಾಕ್‌ಡೌನ್ ಎಂದು ಈ ಹಿಂದೆ ಸರ್ಕಾರ ನೀಡಿದ ಆದೇಶವನ್ನು ಹಿಂಪಡೆದು, ಮೇ 31, 2020 ರಂದು ಬೆಳಗ್ಗೆ 7 ರಿಂದ ಸಂಜೆ 7 ಗಂಟೆ ವರೆಗೆ ಇದ್ದ ಕರ್ಫ್ಯೂವನ್ನು ತೆರವುಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಹೇಳಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿದ ಅವರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಾರ್ಯಕಾರಿ ಸಮಿತಿ ಅಧ್ಯಕ್ಷ ಟಿ.ಎಂ. ವಿಜಯ ಭಾಸ್ಕರ್ ಅವರ ಆದೇಶದ ಮೇರೆಗೆ ಭಾನುವಾರದ ಕರ್ಫ್ಯೂವನ್ನು ಸಡಿಲಿಸಲಾಗಿದ್ದು, ಅಂದು ರಾತ್ರಿ 7 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗೆ ಯಥಾಪ್ರಕಾರ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಅವರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss