Wednesday, July 6, 2022

Latest Posts

ವಿಜಯಪುರ| ಭಾನುವಾರ 88 ಮಂದಿಗೆ ಕೊರೋನಾ ದೃಢ, 60 ಮಂದಿ ಗುಣಮುಖ

ವಿಜಯಪುರ: ಜಿಲ್ಲೆಯಲ್ಲಿ ಭಾನುವಾರ 88 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಮತ್ತೊಬ್ಬರು ಮೃತಪಟ್ಟಿರುವುದು ಸೇರಿದಂತೆ ಸೋಂಕಿತರ ಸಂಖ್ಯೆ 12,664 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲಕುಮಾರ ಹೇಳಿದರು.
ಈ ಕುರಿತು ಮಾಹಿತಿ ನೀಡಿದ ಅವರು, ಜಿಲ್ಲೆಯಲ್ಲಿ ಕೊರೋನಾಗೆ ಮತ್ತೊಬ್ಬರು ಸಾವಿಗೀಡಾಗಿದ್ದು, ಇಲ್ಲಿವರೆಗೆ 195 ಜನರು ಅಸುನೀಗಿದ್ದಾರೆ. ಇಂದು ಮತ್ತೆ 60 ರೋಗಿಗಳು ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈವರೆಗೆ 11,931 ರೋಗಿಗಳು ಗುಣಮುಖಗೊಂಡು ಮನೆಗೆ ತೆರಳಿದ್ದಾರೆ. ಇನ್ನೂ 538 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss