Sunday, August 14, 2022

Latest Posts

ವಿಜಯಪುರ| ಭೀಮಾನದಿಗೆ 32 ಸಾವಿರ ಕ್ಯೂಸೆಕ್ ನೀರು: ನದಿ ಪಾತ್ರದ ಜನರು ಎಚ್ಚರಿಕೆ ವಹಿಸಲು ಡಿಸಿ ಸೂಚನೆ

ವಿಜಯಪುರ: ಪಕ್ಕದ ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಉಜನಿ ಅಣೆಕಟ್ಟೆಯಿಂದ 32 ಸಾವಿರ ಕ್ಯೂಸೆಕ್ ನೀರು ಹೊರಬಿಟ್ಟಿದ್ದು, ಜಿಲ್ಲೆಯ ಇಂಡಿ ಹಾಗೂ ಸಿಂದಗಿ ತಾಲೂಕಿನ ಭೀಮಾನದಿ ಪಾತ್ರದ 14 ಹಳ್ಳಿಗಳ ಗ್ರಾಮಸ್ಥರು ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಪಿ. ಸುನೀಲಕುಮಾರ ಹೇಳಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಸದ್ಯ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಹಾಗೂ ಹೊರ ಹರಿವಿನಿಂದ ಭೀಮಾ ನದಿ ಅಗಲ 1 ಲಕ್ಷ ಕ್ಯೂಸೆಕ್ ನೀರು ಹರಿಯುತ್ತಿದೆ. ಹೀಗಾಗಿ ಭೀಮಾನದಿ ಪಾತ್ರದ ಗ್ರಾಮಸ್ಥರಿಗೆ ತೊಂದರೆಯಾಗುವ ಸಂಭವವಿದ್ದು, ಸೂಕ್ತ ಎಚ್ಚರಿಕೆ ವಹಿಸಬೇಕು ಎಂದು ಅವರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss