ವಿಜಯಪುರ: ಜಿಲ್ಲೆಯಲ್ಲಿ ಮಂಗಳವಾರ 85 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಮತ್ತಿಬ್ಬರು ಮೃತಪಟ್ಟಿರುವುದು ಸೇರಿದಂತೆ ಸೋಂಕಿತರ ಸಂಖ್ಯೆ 8720 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲಕುಮಾರ ಹೇಳಿದರು.
ಈ ಕುರಿತು ಮಾಹಿತಿ ನೀಡಿದ ಅವರು, ಜಿಲ್ಲೆಯಲ್ಲಿ ಕೊರೋನಾಗೆ 65 ವರ್ಷದ ವೃದ್ಧೆ (ಪಿ. 291882), 65 ವರ್ಷದ ವೃದ್ಧ (ಪಿ. 296905) ಇಬ್ಬರು ಮೃತಪಟ್ಟಿದ್ದು, ಇಲ್ಲಿವರೆಗೆ 150 ಜನರು ಸಾವಿಗೀಡಾಗಿದ್ದಾರೆ. ಇಂದು ಮತ್ತೆ 77 ರೋಗಿಗಳು ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈವರೆಗೆ 7763 ರೋಗಿಗಳು ಗುಣಮುಖಗೊಂಡು ಮನೆಗೆ ತೆರಳಿದ್ದಾರೆ. ಇನ್ನೂ 807 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.