Monday, July 4, 2022

Latest Posts

ವಿಜಯಪುರ| ಮತ್ತೆ 4 ಜನರಲ್ಲಿ ಕೊರೋನಾ ದೃಢ, ಸೋಂಕಿತರ ಸಂಖ್ಯೆ 321ಕ್ಕೆ ಏರಿಕೆ

ವಿಜಯಪುರ: ಜಿಲ್ಲೆಯಲ್ಲಿ ಬುಧವಾರ ಮತ್ತೆ 4 ಜನರಲ್ಲಿ ಸೋಂಕು ಪತ್ತೆಯಾಗಿದ್ದು, 7 ಜನರು ಮೃತಪಟ್ಟಿರುವುದು ಸೇರಿದಂತೆ ಸೋಂಕಿತರ ಸಂಖ್ಯೆ 321 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಹೇಳಿದರು.
ಈ ಕುರಿತು ಮಾಹಿತಿ ನೀಡಿದ ಅವರು, ಮಹಾರಾಷ್ಟ್ರದಿಂದ ಆಗಮಿಸಿದ ಇಬ್ಬರು ಹಾಗೂ ನೆಗಡಿ, ಕೆಮ್ಮು, ಜ್ವರ ಪ್ರಕರಣದ ಇಬ್ಬರಲ್ಲಿ ಸೋಂಕು ದೃಢಪಟ್ಟಿದೆ. 24 ವರ್ಷದ ಮಹಿಳೆ (ಪಿ 9722), 27 ವರ್ಷದ ವ್ಯಕ್ತಿ (ಪಿ 9723), 58 ವರ್ಷದ ವ್ಯಕ್ತಿ (ಪಿ 9724) ಹಾಗೂ 21 ವರ್ಷದ ಯುವಕ (ಪಿ 9725) ಸೇರಿದಂತೆ 4 ಜನರಲ್ಲಿ ಸೋಂಕು ಪತ್ತೆಯಾಗಿದೆ. ಇಂದು 10 ರೋಗಿಗಳು ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಇಲ್ಲಿವರೆಗೆ ಒಟ್ಟು 232 ಸೋಂಕಿತರು ಗುಣಮುಖರಾಗಿ, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನುಳಿದ ಸೋಂಕಿತರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss