Monday, July 4, 2022

Latest Posts

ವಿಜಯಪುರ| ಲಘು ಭೂಕಂಪನ ರಿಕ್ಟರ್ ಮಾಪಕದಲ್ಲಿ ದಾಖಲಾಗಿಲ್ಲ: ಡಿಸಿ

ವಿಜಯಪುರ: ಜಿಲ್ಲೆಯ ಕೊಲ್ಹಾರ ತಾಲೂಕಿನ ಮಸೂತಿ ಸೇರಿದಂತೆ ಸುತ್ತಮುತ್ತ ಗ್ರಾಮದ ಜನರಿಗೆ ನಿನ್ನೆ ರಾತ್ರಿ ಲಘು ಭೂಕಂಪನದ ಅನುಭವವಾಗಿದೆ ಎನ್ನುವುದು ತಿಳಿದು ಬಂದಿದ್ದು, ಆದರೆ ಆಲಮಟ್ಟಿ ಭೂಕಂಪನ ಅಳತೆ ಮಾಪನ ಕೇಂದ್ರದ ರಿಕ್ಟರ್ ಮಾಪಕದಲ್ಲಿ ಈ ಕುರಿತು ಯಾವುದೇ ರೀತಿ ದಾಖಲಾಗಿಲ್ಲ ಎಂದು ಜಿಲ್ಲಾಧಿಕಾರಿ ಪಿ. ಸುನೀಲಕುಮಾರ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಈ ಹಿಂದೆ ಲಘು ಭೂಕಂಪನವಾದ ಅನುಭವವಾಗಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ. ಮಸೂತಿ ಗ್ರಾಮದ ಸುತ್ತಮುತ್ತ ಸದ್ಯ ಮತ್ತೆ ಲಘು ಭೂಕಂಪನವಾದ ಅನುಭವವಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದು, ಈ ಕುರಿತು ಬೆಂಗಳೂರಿನ ಭೂಕಂಪನ ಅಳತೆ ಮಾಪನ ಕೇಂದ್ರಕ್ಕೆ ಮಾಹಿತಿ ನೀಡಲಾಗಿದೆ. ಅಲ್ಲದೆ ಆಲಮಟ್ಟಿ ಭೂ ಮಾಪನ ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲಿಸಿ, ಗ್ರಾಮಸ್ಥರ ಭಯ ನಿವಾರಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ ಎಂದರು.

ಮಳೆಗಾಲ ಸಂದರ್ಭ ಇಂತಹ ಅನುಭವವಾಗುವುದು ಸಹಜ ಎಂದು ವಿಜ್ಞಾನಿಗಳು ಹೇಳುತ್ತಾರೆ. ಈ ಕುರಿತು ಜಿಲ್ಲೆಯಲ್ಲಿ ನಡೆದಿದೆ ಎನ್ನಲಾದ ಲಘು ಭೂಕಂಪನ ಅನುಭವಕ್ಕೆ ಪೂರಕ ವಾಗಿದೆಯೇ ಎನ್ನುವ ಕುರಿತು ಗ್ರಾಮಸ್ಥರನ್ನು ಭೇಟಿ ಮಾಡಿ ಮಾಹಿತಿ ಕಲೆ ಹಾಕುವಂತೆ ಉಪವಿಭಾಗಾಧಿಕಾರಿಗಳನ್ನು ಮಸೂತಿ ಗ್ರಾಮಕ್ಕೆ ಕಳುಹಿಸಲಾಗಿದೆ. ಅವರು ನೀಡುವ ವರದಿ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss