Friday, July 1, 2022

Latest Posts

ವಿಜಯಪುರ| ಲಾಕ್‌ಡೌನ್‌ನಿಂದಾಗಿ ಬೆಂಗಳೂರಿನಲ್ಲಿ ಸಿಲುಕಿಕೊಂಡಿದ್ದ ಕಾರ್ಮಿಕರಿಗೆ ಬಿಜೆಪಿ ವತಿಯಿಂದ ಉಪಹಾರ ವ್ಯವಸ್ಥೆ

ವಿಜಯಪುರ: ಕೊರೋನಾ ಲಾಕ್‌ಡೌನ್‌ನಿಂದಾಗಿ ಬೆಂಗಳೂರಿನಲ್ಲಿ ಸಿಲುಕಿಕೊಂಡಿದ್ದ ಕಾರ್ಮಿಕರು ನಗರದ ಕೇಂದ್ರ ಬಸ್ ನಿಲ್ದಾಣಕ್ಕೆ ಆಗಮಿಸಿದ ವೇಳೆ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಮಂಗಳವಾರ ಉಪಹಾರ ವ್ಯವಸ್ಥೆ ಮಾಡಲಾಗಿತ್ತು.
ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕುಚಬಾಳ ಮಾತನಾಡಿ, ಸರ್ಕಾರ ಕಾರ್ಮಿಕರ ಊರುಗಳಿಗೆ ತೆರಳಲು ಎಲ್ಲ ವ್ಯವಸ್ಥೆ ಮಾಡಿದೆ. ಸುರಕ್ಷತೆಯ ದೃಷ್ಟಿಯಿಂದ ಎಲ್ಲ ಕಾರ್ಮಿಕರು ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಕಾರ್ಮಿಕರಿಗೆ ತಮ್ಮ ತಮ್ಮ ಊರುಗಳಿಗೆ ತೆರಳಲು ಉಚಿತ ಬಸ್ ಸೌಲಭ್ಯವನ್ನು ಇನ್ನೂ ಎರಡು ದಿನ ವಿಸ್ತರಣೆ ಮಾಡಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಬಸ್ ನಿಲ್ದಾಣದಲ್ಲಿ ಯಾರೂ ನೂಕು ನುಗ್ಗಲು ಮಾಡದೆ ಸಾಮಾಜಿಕ ಅಂತರ ಕಾಯ್ದುಕೊಂಡು ಸುರಕ್ಷಿತವಾಗಿ ಪ್ರ‍್ರಯಾಣಿಸುವಂತೆ ಮನವಿ ಮಾಡಿಕೊಂಡರು. ಎಲ್ಲ ಕಾರ್ಮಿಕರಿಗೂ ತಮ್ಮ ಊರುಗಳಿಗೆ ತೆರಳಲು ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ ಯಾರು ಭಯಪಡಬಾರದು ಎಂದು ತಿಳಿಸಿದರು.
ಸಂದರ್ಭದಲ್ಲಿ ಚಂದ್ರಶೇಖರ ಕವಟಗಿ, ವಿಜುಗೌಡ ಪಾಟೀಲ, ಪ್ರಕಾಶ ಅಕ್ಕಲಕೋಟ, ರಾಜು ಮಗಿಮಠ, ಸುರೇಶ ಬಿರಾದಾರ, ಕೃಷ್ಣಾ ಗುನಾಳಕರ, ವಿಜಯ ಜೋಶಿ, ಪಾಪುಸಿಂಗ್ ರಜಪೂತ ಮತ್ತಿರರು ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss