Saturday, July 2, 2022

Latest Posts

ವಿಜಯಪುರ| ಶನಿವಾರ 237 ಮಂದಿಗೆ ಕೊರೋನಾ ದೃಢ, 135 ಮಂದಿ ಗುಣಮುಖ, ಇಬ್ಬರ ಸಾವು

ವಿಜಯಪುರ: ಜಿಲ್ಲೆಯಲ್ಲಿ ಶನಿವಾರ 237 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 4717 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲಕುಮಾರ ಹೇಳಿದರು. ಈ ಕುರಿತು ಮಾಹಿತಿ ನೀಡಿದ ಅವರು, ನಗರದ ಕುಂಬಾರ ಗಲ್ಲಿಯ 66 ವರ್ಷದ (ಪಿ 135717) ವೃದ್ಧ ಹಾಗೂ ಇಲ್ಲಿನ 40 ವರ್ಷದ (ಪಿ 100916) ವ್ಯಕ್ತಿ ಸೇರಿದಂತೆ ಇಬ್ಬರು ಕೊರೋನಾಗೆ ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಕೊರೋನಾಗೆ 51 ಜನರು ಸಾವಿಗೀಡಾಗಿದ್ದಾರೆ. ಇಂದು ಮತ್ತೆ 135 ರೋಗಿಗಳು ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಈವರೆಗೆ 3595 ರೋಗಿಗಳು ಗುಣಮುಖಗೊಂಡ ಮನೆಗೆ ತೆರಳಿದ್ದಾರೆ. ಇನ್ನೂ 1071 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss