Sunday, August 14, 2022

Latest Posts

ವಿಜಯಪುರ: ಷಣ್ಮುಖಾರೂಢ ಮಠದ ಅಭಿನವ ಶಿವಪುತ್ರ ಶ್ರೀಗಳು ಲಿಂಗೈಕ್ಯ

ವಿಜಯಪುರ: ನಗರದ ಶ್ರೀ ಷಣ್ಮುಖಾರೂಢ ಮಠದ ಪೀಠಾಧಿಪತಿ ಶ್ರೀ ಅಭಿನವ ಶಿವಪುತ್ರ ಮಹಾಸ್ವಾಮಿಗಳು (63) ಶುಕ್ರವಾರ ರಾತ್ರಿ ಲಿಂಗೈಕ್ಯರಾಗಿದ್ದಾರೆ.

ಶ್ರೀ ಅಭಿನವ ಶಿವಪುತ್ರ ಮಹಾಸ್ವಾಮೀಜಿಗಳಿಗೆ ಶುಕ್ರವಾರ ಮಧ್ಯಾಹ್ನ ಲಘು‌ ಹೃದಯಾಘಾತವಾಗಿದ್ದರಿಂದ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಅನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಕೆಎಲ್ಇ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಅಪಾರ ಭಕ್ತಗಣ ಹೊಂದಿರುವ ಸ್ವಾಮೀಜಿ, ಆರೂಢ ಪರಂಪರೆಯ ಪೀಠಾಧಿಪತಿಗಳಾಗಿದ್ದರು.

ಸ್ವಾಮೀಜಿ ನಿಧನಕ್ಕೆ ಜಿಲ್ಲೆಯ ಶ್ರೀಗಳು, ಜನಪ್ರತಿನಿಧಿ ಹಾಗೂ ಗಣ್ಯರು ಸಂತಾಪ ವ್ಯಕ್ತ ಪಡಿಸಿದ್ದಾರೆ. ಶನಿವಾರ ಹುಬ್ಬಳ್ಳಿಯಲ್ಲಿ ಸ್ವಾಮೀಜಿಗಳ ಅಂತ್ಯಕ್ರಿಯೆ ನಡೆಯಲಿದೆ ಎಂದು ಮಠದ ಮೂಲಗಳು ತಿಳಿಸಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss