ವಿಜಯಪುರ: ಕೊರೋನಾ ಮುನ್ನೆಚ್ಚರಿಕೆಯಾಗಿ ಶಾಲಾ, ಕಾಲೇಜ್ಗಳ ಆರಂಭಕ್ಕೆ ಸರ್ಕಾರ ಇನ್ನು ಅನುಮತಿ ನೀಡದಿದ್ದರೂ, ಇಲ್ಲಿನ ರಹಿಂ ನಗರದ ಶಾಲೆಯೊಂದರಲ್ಲಿ ಮಕ್ಕಳನ್ನು ಒಂದೆಡೆ ಕೂಡಿಸಿ ಪಾಠ ಹೇಳುತ್ತಿರುವುದು ಕಂಡು ಬಂದಿದೆ.
ಇಲ್ಲಿನ ರಹಿಂ ನಗರದ ರೋಸ್ ಲೈನ್ ಶಾಲೆಯ ಒಂದು ಕೊಠಡಿಯಲ್ಲಿ ಮಕ್ಕಳನ್ನು ಒಂದೆಡೆ ಕೂಡಿಸಿ, ಪಾಠ ಮಾಡುತ್ತಿರುವುದು ಸುದ್ದಿಯಾಗುತ್ತಿದ್ದಂತೆ, ನಗರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಶರೀಪ್ಸಾಹೇಬ ನದಾಫ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.