Thursday, July 7, 2022

Latest Posts

ವಿಜಯಪುರ| ಸೋಂಕು ಪತ್ತೆಯಾದ ಗಣಿಹಾರ ಗ್ರಾಮ ಸ್ತಬ್ಧ: ಇಂದು 18 ಪಾಸಿಟಿವ್ ಪ್ರಕರಣದ ಶಂಕೆ?

ವಿಜಯಪುರ: ಜಿಲ್ಲೆಯ ಸಿಂದಗಿ ತಾಲೂಕಿನ ಗಣಿಹಾರ ಗ್ರಾಮದಲ್ಲಿ ಶನಿವಾರ ಓರ್ವ ವ್ಯಕ್ತಿಯಲ್ಲಿ ಕೊರೋನಾ ಸೋಂಕು ಪತ್ತೆಯಾದ ಹಿನ್ನೆಲೆ ಗ್ರಾಮ ಸಂಪೂರ್ಣ ಸ್ತಬ್ಧಗೊಂಡಿದ್ದು, ಜಿಲ್ಲೆಯಲ್ಲಿ ಭಾನುವಾರ ಇನ್ನೂ 18 ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗುವ ಶಂಕೆ ವ್ಯಕ್ತವಾಗಿದೆ.
ಗ್ರಾಮದಲ್ಲಿ ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಗಾಗಿದ್ದ ವ್ಯಕ್ತಿಯ ಗಂಟಲು ದ್ರವ ಪರೀಕ್ಷಾ ವರದಿ ಬರುವ ಮುನ್ನವೇ ಸಾಂಸ್ಥಿಕ ಕ್ವಾರಂಟೈನ್‌ನಿಂದ ಮುಕ್ತಿ ನೀಡಲಾಗಿತ್ತು. ಅಲ್ಲದೆ ಈತ ಹೋಮ್ ಕ್ವಾರಂಟೈನ್‌ಗೆ ಒಳಗಾಗದೇ ಗ್ರಾಮದ ತುಂಬ ಓಡಾಡಿದ್ದಾನೆ. ಈತನಿಗೆ ಶನಿವಾರ ಸೋಂಕು ದೃಢಪಟ್ಟಿದ್ದರಿಂದ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಸೋಂಕಿತ ವ್ಯಕ್ತಿಯ ಗಂಟಲು ದ್ರವ ಪರೀಕ್ಷೆ ವರದಿ ಬರುವ ಮುನ್ನವೇ ಈತನಿಗೆ ಮನೆಗೆ ಕಳುಹಿಸಿರುವ ಕುರಿತು ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸದ್ಯ ಈ ಸೋಂಕಿತನ ಸಂಪರ್ಕಕ್ಕೆ ಬಂದ 20 ಕ್ಕೂ ಹೆಚ್ಚು ಜನರನ್ನು ಕ್ವಾರಂಟೈನ್ ಮಾಡಲಾಗಿದೆ. ಗ್ರಾಮಸ್ಥರು ಸೋಂಕು ತಗಲುವ ಭೀತಿಯಿಂದ ಸ್ವಯಂ ಪ್ರೇರಿತವಾಗಿ ಗ್ರಾಮವನ್ನು ಲಾಕ್‌ಡೌನ್ ಮಾಡಿಕೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss