Thursday, August 18, 2022

Latest Posts

ವಿಜಯಪುರ: ಹಿರಿಯ ಪತ್ರಕರ್ತ ರವಿ ಬೆಳಗೆರೆ ನಿಧನಕ್ಕೆ ಶ್ರದ್ಧಾಂಜಲಿ

ಹೊಸ ದಿಗಂತ ವರದಿ ವಿಜಯಪುರ: 

ಇಲ್ಲಿನ ಗಾಂಧಿ ವೃತ್ತದಲ್ಲಿ ಹಿರಿಯ ಪತ್ರಕರ್ತ ರವಿ ಬೆಳಗೆರೆ ನಿಧನಕ್ಕೆ ನಗರದ ಪತ್ರಕರ್ತರ ಬಳಗದ ವತಿಯಿಂದ ಶುಕ್ರವಾರ ಶ್ರದ್ಧಾಂಜಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಈ ಸಂದರ್ಭ ಪತ್ರಕರ್ತರು ಮಾತನಾಡಿ, ಪತ್ರಕರ್ತ ರವಿ ಬೆಳಗೆರೆ ತಮ್ಮ ಬರವಣಿಗೆ ಶೈಲಿಯಿಂದ ರಾಜ್ಯದ ಪತ್ರಿಕೋದ್ಯಮದಲ್ಲಿ ವಿಶಿಷ್ಟ ಛಾಪು ಮೂಡಿಸಿದ್ದರು. ಅಲ್ಲದೆ ಅಪಾರ ಸಂಖ್ಯೆಯ ಓದುಗ ಅಭಿಮಾನಿಗಳನ್ನು ಹೊಂದಿದ್ದರು. ಅವರ ಅಗಲಿಕೆ ನೋವು ತಂದಿದೆ ಎಂದರು.ನಗರದ ಹಲವು ಪತ್ರಕರ್ತರು, ಮಾಧ್ಯಮ ಮಿತ್ರರು ಪಾಲ್ಗೊಂಡಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!