spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ವಿಜಯಪುರ| ಹೆಚ್ಚಿನ ಚಿಕಿತ್ಸೆಗೆ ಸಾಹುಕಾರ ಭೈರಗೊಂಡ ಬೇರೆ ಆಸ್ಪತ್ರೆಗೆ ರವಾನೆ

- Advertisement -Nitte

ಹೊಸ ದಿಗಂತ ವರದಿ, ವಿಜಯಪುರ:

ಗುಂಡಿನ ದಾಳಿಗೆ ತುತ್ತಾಗಿ ಐದು ದಿನಗಳಿಂದ ನಗರದ ಬಿಎಲ್‌ಡಿಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭೀಮಾತೀರದ ಮಹಾದೇವ ಸಾಹುಕಾರ ಭೈರಗೊಂಡನನ್ನು ಹೆಚ್ಚಿನ ಚಿಕಿತ್ಸೆಗಾಗಿ ಶುಕ್ರವಾರ ರಾತ್ರಿ ಬೇರೆ ಆಸ್ಪತ್ರೆಗೆ ರವಾನಿಸಲಾಗಿದೆ.
ವಿಜಯಪುರ ತಾಲೂಕಿನ ಕನ್ನಾಳ ಕ್ರಾಸ್ ಬಳಿ ನ. 2 ರಂದು ಮಹಾದೇವ ಸಾಹುಕಾರ ಭೈರಗೊಂಡನ ಕಾರ್‌ಗೆ ಟಿಪ್ಪರ್ ಡಿಕ್ಕಿ ಪಡಿಸಿ, ಗುಂಡಿನ ದಾಳಿ ನಡೆಸಲಾಗಿತ್ತು. ಈ ಘಟನೆ ಬಳಿಕ ಇಲ್ಲಿನ ಬಿಎಲ್‌ಡಿಇ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮೂಲಕ ಮಹಾದೇವ ಸಾಹುಕಾರ ಭೈರಗೊಂಡನ ಪಕ್ಕೆಲುಬಿಗೆ ತಗುಲಿದ ಗುಂಡುಗಳನ್ನು ವೈದ್ಯರು ಹೊರ ತೆಗೆದಿದ್ದರು. ಅನಂತರ ಕಳೆದ ಐದು ದಿನಗಳಿಂದ ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗಿದ್ದು, ಸ್ವಲ್ಪ ಗಂಭೀರವಾಗಿದ್ದರೂ ಆರೋಗ್ಯ ಸ್ಥಿತಿ ಸ್ಥಿರವಾಗಿತ್ತು.
ಸದ್ಯ ಬಿಎಲ್‌ಡಿಇ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್ ತಿಳಿಸಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss