Thursday, June 30, 2022

Latest Posts

ವಿಜಯಪುರ| 11 ವರ್ಷದ ಬಾಲಕನಲ್ಲಿ ಕೊರೋನಾ ಪಾಸಿಟಿವ್ , ಸೋಂಕಿತರ ಸಂಖ್ಯೆ 123ಕ್ಕೆ ಏರಿಕೆ

ವಿಜಯಪುರ: ಜಿಲ್ಲೆಯಲ್ಲಿ 11 ವರ್ಷದ ಬಾಲಕನೊಬ್ಬನಲ್ಲಿ ಸೋಮವಾರ ಕೊರೋನಾ ಸೋಂಕು ಪತ್ತೆಯಾಗಿದ್ದು, ಐದು ಜನರು ಮೃತಪಟ್ಟಿರುವುದು ಸೇರಿದಂತೆ ಸೋಂಕಿತರ ಸಂಖ್ಯೆ 123 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಹೇಳಿದರು.
ನಗರದಲ್ಲಿ ಈ ಕುರಿತು ಮಾತನಾಡಿದ ಅವರು, ಮಹಾರಾಷ್ಟ್ರದಿಂದ ಆಗಮಿಸಿದ ರೋಗಿ ಸಂಖ್ಯೆ 3250ರ 11 ವರ್ಷದ ಬಾಲಕನಿಗೆ ಸೋಂಕು ದೃಢಪಟ್ಟಿದೆ. ಈಗಾಗಲೇ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿದ್ದ ಬಾಲಕನಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿನಿಂದ ಬಳಲುತ್ತಿದ್ದ 55 ಜನರು ಗುಣಮುಖಗೊಂಡು, ಜಿಲ್ಲಾಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನುಳಿದ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss