Friday, July 1, 2022

Latest Posts

ವಿಜಯಪುರ| 13 ಜನರಲ್ಲಿ ಕೊರೋನಾ ಸೋಂಕು ದೃಢ: ಸೋಂಕಿತರ ಸಂಖ್ಯೆ 217 ಕ್ಕೆ ಏರಿಕೆ

ವಿಜಯಪುರ: ಜಿಲ್ಲೆಯಲ್ಲಿ ಬುಧವಾರ 6 ಜನ ಮಕ್ಕಳು ಸೇರಿದಂತೆ 13 ಜನರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಆರು ಜನರು ಮೃತಪಟ್ಟಿರುವುದು ಸೇರಿದಂತೆ ಸೋಂಕಿತರ ಸಂಖ್ಯೆ 217 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಹೇಳಿದರು.
ಈ ಕುರಿತು ಮಾಹಿತಿ ನೀಡಿದ ಅವರು, ಮಹಾರಾಷ್ಟ್ರದಿಂದ ಆಗಮಿಸಿದ 13 ಜನ ಕಾರ್ಮಿಕರಲ್ಲಿ ಸೋಂಕು ದೃಢಪಟ್ಟಿದ್ದು, ಸೋಂಕಿತರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈಗಾಗಲೇ ಸೋಂಕಿನಿಂದ ಬಳಲುತ್ತಿದ್ದ 131 ರೋಗಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಇನ್ನುಳಿದ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss