Monday, August 8, 2022

Latest Posts

ವಿಜಯಪುರ| 3 ವರ್ಷದ ಬಾಲಕನಲ್ಲಿ ಕೊರೋನಾ ಪತ್ತೆ: ಸೋಂಕಿತರ ಸಂಖ್ಯೆ 229 ಕ್ಕೆ ಏರಿಕೆ

ವಿಜಯಪುರ: ಜಿಲ್ಲೆಯಲ್ಲಿ ಭಾನುವಾರ ಮೂರು ವರ್ಷದ ಬಾಲಕನಲ್ಲಿ ಸೋಂಕು ಪತ್ತೆಯಾಗಿದ್ದು, ಆರು ಜನರು ಸಾವಿಗೀಡಾಗಿರುವುದು ಸೇರಿದಂತೆ ಸೋಂಕಿತರ ಸಂಖ್ಯೆ 229 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಹೇಳಿದರು.
ಈ ಕುರಿತು ಮಾಹಿತಿ ನೀಡಿದ ಅವರು, ಜಿಲ್ಲೆಯ ಕಂಟೇನ್ಮೆಂಟ್ ಝೋನ್‌ನ 3 ವರ್ಷದ ಬಾಲಕನಿಗೆ (ಪಿ 6826) ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು 10 ಸೋಂಕಿತರು ಗುಣಮುಖಗೊಂಡು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇಲ್ಲಿವರೆ ಒಟ್ಟು 162 ಸೋಂಕಿತರು ಗುಣಮುಖಗೊಂಡಿದ್ದಾರೆ. ಇನ್ನುಳಿದ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss