Wednesday, August 10, 2022

Latest Posts

ವಿಟ್ಲ ಪೊಲೀಸ್‌ ಸಿಬ್ಬಂದಿಗೆ ಕೊರೊನಾ ಪಾಸಿಟಿವ್‌: ಕೋವಿಡ್ ವಾರಿಯರ್ಸ್ ನ್ನೂ ಬಿಟ್ಟಿಲ್ಲ ಮಹಾಮಾರಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಮತ್ತೆ ಒಂದು ಕೊರೋನಾ ಪಾಸಿಟಿವ್ ಕಂಡುಬಂದಿದೆ.
ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಕೋವಿಡ್ ವಾರಿಯರ್ಸ್ ಗೂ ಕೊರೋನಾ ತಟ್ಟಿದಂತಾಗಿದೆ. ಸೋಂಕಿತ ಪೊಲೀಸ್ ಸಿಬ್ಬಂದಿಯನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಪ್ರಕರಣದೊಂದಿಗೆ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 66 ಕ್ಕೆ ಏರಿಕೆಯಾಗಿದೆ. ಮುಂಬೈನಿಂದ ಬಂದಿದ್ದ ವ್ಯಕ್ತಿ ಕ್ವಾರಂಟೈನ್ ಗೆ ಮುನ್ನ ವಿಟ್ಲ ಪೊಲೀಸ್ ಠಾಣೆಗೆ ಬಂದಿದ್ದು ಈತನಿಂದಲೇ ಪೊಲೀಸ್ ಸಿಬ್ಬಂದಿಗೆ ಸೋಂಕು ತಗುಲಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss