Monday, August 8, 2022

Latest Posts

ವಿಡಿಯೋ ಕಾನ್ಫರೆನ್ಸ್ ಮೂಲಕ ಮಾರಿಷಸ್‌ನ ಹೊಸ ಸುಪ್ರೀಂ ಕೋರ್ಟ್ ಕಟ್ಟಡವನ್ನು ಉದ್ಘಾಟಿಸಿದ ಪ್ರಧಾನಿ ಮೋದಿ

ನವದೆಹಲಿ: ಮಾರಿಷಸ್‌ನ ಹೊಸ ಸುಪ್ರೀಂ ಕೋರ್ಟ್ ಕಟ್ಟಡವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಮಾರಿಷಸ್‌ನ ಪ್ರಧಾನಿ ಪ್ರವೀಂದ್ ಜುಗ್ನಾಥ್ ಜಂಟಿಯಾಗಿ ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಇಂದು ಉದ್ಘಾಟಿಸಿದರು.
ವಿಡಿಯೋ ಕಾನ್ಫರೆನ್ಸ್ ಮೂಲಕ ಸುಪ್ರೀಂಕೋರ್ಟ್ ಕಟ್ಟಡ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ, ಕೋವಿಡ್-19 ರೋಗದ ಪರಿಣಾಮಕಾರಿ ನಿರ್ವಹಣೆಗಾಗಿ ಸರ್ಕಾರ ಮತ್ತು ಮಾರಿಷಸ್‌ನ ಜನರನ್ನು ನಾನು ಅಭಿನಂದಿಸುತ್ತೇನೆ. ಸಮಯಕ್ಕೆ ಸರಿಯಾಗಿ ಔಷಧಿಗಳ ಪೂರೈಕೆ ಮತ್ತು ಅನುಭವಗಳ ಹಂಚಿಕೆಯ ಮೂಲಕ ಭಾರತ ಈ ಪ್ರಯತ್ನವನ್ನು ಬೆಂಬಲಿಸಲು ಸಾಧ್ಯವಾಯಿತು ಎಂದು ನನಗೆ ಸಂತೋಷವಾಗಿದೆ ಎಂದು ಹೇಳಿದರು.
ಭಾರತ ಮತ್ತು ಮಾರಿಷಸ್ ಸ್ವತಂತ್ರ್ಯ ನ್ಯಾಯಾಂಗದ ಬೆಂಬಲಿಗ ರಾಷ್ಟ್ರಗಳಾಗಿದ್ದು, ಪ್ರಜಾಪ್ರಭುತ್ವದ ಗೆಲುವಿಗಾಗಿ ಇದು ಅತ್ಯವಶ್ಯಕ ಎಂಬುದನ್ನು ಮನಗಂಡಿವೆ ಎಂದು  ಪ್ರಧಾನಿ ನುಡಿದರು.  ಮಾರಿಷನ್ ಪ್ರಧಾನಿ ಪ್ರವೀಂದ್ ಜುಗ್ನಾಥ್, ಸುಪ್ರೀಂಕೋರ್ಟ್ ಕಟ್ಟಡಕ್ಕೆ ಆರ್ಥಿಕ ನೆರವು ನೀಡಿದ ಭಾರತಕ್ಕೆ ಧನ್ಯವಾದ ಅರ್ಪಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss