ಹೊಸದಿಗಂತ ಆನ್ಲೈನ್ ಡೆಸ್ಕ್:
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವೈಯಕ್ತಿಕ ಪ್ರವಾಸಕ್ಕಾಗಿ ವಿದೇಶಕ್ಕೆ ತೆರಳಿದ್ದಾರೆ.
ಆದರೆ ರಾಹುಲ್ ಗಾಂಧಿ ಭೇಟಿ ಕುರಿತು ಯಾವುದೇ ಮಾಹಿತಿ ಹೊರಬಿದ್ದಿಲ್ಲ. ಕೆಲ ಸಮಯದವರೆಗೆ ರಾಹುಲ್ ಗಾಂಧಿ ದೇಶದ ಹೊರಗಿರಲಿದ್ದಾರೆ ಎಂದು ಪಕ್ಷದ ಪ್ರಧಾನ ವಕ್ತಾರ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ.
ರಾಹುಲ್ ಗಾಂಧಿ ಅಲ್ಪಾವಧಿಯ ವೈಯಕ್ತಿಕ ಭೇಟಿಗಾಗಿ ವಿದೇಶಕ್ಕೆ ತೆರಳಿದ್ದಾರೆ. ಇನ್ನು ಸ್ವಲ್ಪ ಸಮಯ ಹೊರಗೇ ಇರುತ್ತಾರೆ ಎಂದು ಮಾಹಿತಿ ನೀಡಿದ್ದಾರೆ. ಎಲ್ಲಿಗೆ ತೆರಳಿದ್ದಾರೆ ಎನ್ನುವ ಮಾಹಿತಿ ಇಲ್ಲ.
ಮೂಲಗಳ ಪ್ರಕಾರ ರಾಹುಲ್ ಇಟಲಿಯಲ್ಲಿ ಇರುವ ತಮ್ಮ ಅಜ್ಜಿಯನ್ನು ನೋಡಲು ಹೋಗಿದ್ದಾರೆ ಎನ್ನಲಾಗಿದೆ.