ವಿದೇಶಗಳಿಂದ ಕಾಸರಗೋಡು ಜಿಲ್ಲೆಗೆ ಹಿಂತಿರುಗಲು ಹೆಸರು ನೋಂದಾಯಿಸಿದ್ದು 19,000 ಮಂದಿ!

0
79

ಕಾಸರಗೋಡು: ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಬಾಕಿಯಾಗಿದ್ದ ವಿದೇಶಗಳಿಂದ ಕಾಸರಗೋಡು ಜಿಲ್ಲೆಗೆ ಹಿಂತಿರುಗಲು ಇನ್ನೂ ಬರೋಬ್ಬರಿ 19,000 ಮಂದಿ ಹೆಸರು ನೋಂದಾಯಿಸಿದ್ದಾರೆ.
ಮಲಪ್ಪುರಂ ಜಿಲ್ಲೆಯಲ್ಲಿ 79,000 ಮಂದಿ, ಕಣ್ಣೂರಿನಲ್ಲಿ 51,000 ಮಂದಿ ಮತ್ತು ಪಾಲಕ್ಕಾಡಿನಲ್ಲಿ 28,000 ಮಂದಿ ಹೆಸರು ನೋಂದಾಯಿಸಿದ್ದಾರೆ. ಈ ಸಂಖ್ಯೆ ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಳವಾಗಬಹುದೆಂದು ನಿರೀಕ್ಷಿಸಲಾಗಿದೆ.
ಕಳೆದ 15 ದಿನಗಳಲ್ಲಿ ರಾಜ್ಯದಲ್ಲಿ ಕೋವಿಡ್ ರೋಗಿಗಳ ಸಂಖ್ಯೆಯಲ್ಲಿ ಪಾಲಕ್ಕಾಡು, ಮಲಪ್ಪುರಂ ಹಾಗೂ ಕೊಲ್ಲಂ ಜಿಲ್ಲೆಗಳಲ್ಲಿ ತಲಾ ಶೇಕಡಾ 40ರಷ್ಟು ಹೆಚ್ಚಳ ಉಂಟಾಗಿದೆ. ಅದೇ ರೀತಿ ಸಂಪರ್ಕದ ಮೂಲಕ ಕೋವಿಡ್ ತಗುಲಿರುವವರ ಸಂಖ್ಯೆಯಲ್ಲಿ ಶೇಕಡಾ 60ರಷ್ಟು ಮಂದಿ ಪಾಲಕ್ಕಾಡು, ಮಲಪ್ಪುರಂ ಮತ್ತು ಕಣ್ಣೂರು ಜಿಲ್ಲೆಯವರಾಗಿದ್ದಾರೆ.
ವಿದೇಶಗಳಿಂದ ಮಾತ್ರವಲ್ಲದೆ ದೇಶದ ವಿವಿಧ ರಾಜ್ಯಗಳಿಂದಲೂ ಕೇರಳೀಯರು ಇನ್ನೂ ಲಕ್ಷಾಂತರ ಸಂಖ್ಯೆಯಲ್ಲಿ ಮರಳಲಿದ್ದಾರೆ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಕೇರಳದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆಯಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ. ಈ ಮಧ್ಯೆ ಹೊರ ರಾಜ್ಯಗಳಿಂದ ಕೇರಳಕ್ಕೆ ಹಿಂತಿರುಗಲು ಹೆಸರು ನೋಂದಾಯಿಸಿದವರ ಸಂಖ್ಯೆ ಬೇರೆಯೇ ಇದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

LEAVE A REPLY

Please enter your comment!
Please enter your name here