ಧಾರವಾಡ: ಮನುಕುಲದ ಮೇಲೆ ಕೋವಿಡ್ ತನ್ನ ಕ್ರೌರ್ಯ ಮೆರೆಯುತ್ತಿದೆ. ವಿದ್ಯಾಕಾಶಿ ಧಾರವಾಡ ಜಿಲ್ಲೆಯಲ್ಲಿ ಬುಧವಾರ ಈ ಸೋಂಕಿನಿ0ದ ಐವರು ಮೃತಪಟ್ಟಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 44ಕ್ಕೆ ಏರಿಕೆ ಕಂಡಿದೆ.
ಅಲ್ಲದೇ, ಬರೋಬ್ಬರಿ 139 ಜನರಲ್ಲಿ ಸೋಂಕು ಪತ್ತೆಯಾಗಿದೆ. ಇದರಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1,398ಕ್ಕೆ ಹೆಚ್ಚಿದೆ. ಜಿಲ್ಲೆಯಲ್ಲಿ ನಿತ್ಯವೂ ಸೋಂಕಿತರ ಹಾಗೂ ಮೃತರ ಸಂಖ್ಯೆ ನಿತ್ಯ ಹೆಚ್ಚುತ್ತಿದೆ.
ಇದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. 32 ಜನ ಬಿಡುಗಡೆಗೊಂಡಿದ್ದು, ಈವರೆಗೆ 482 ಜನ ಸೋಂಕಿನಿ0ದ ಗುಣವಾಗಿ ಬಿಡುಗಡೆಯಾಗಿದ್ದಾರೆ. ಅಲ್ಲದೇ, 872 ಸಕ್ರಿಯ ಪ್ರಕರಣಗಳಿಗೆ ಹುಬ್ಬಳ್ಳಿ ಕಿಮನ್ಸ್ನಲ್ಲಿ ಚಿಕಿತ್ಸೆ ನೀಡುತ್ತಿದೆ.