Sunday, June 26, 2022

Latest Posts

ವಿದ್ಯಾರ್ಥಿಗಳಲ್ಲಿ ನಿರ್ದಿಷ್ಟ ಗುರಿ ಇದ್ದಾಗ ಯಶಸ್ಸು ಸಾಧ್ಯ: ಬಿ.ಜಿ.ಅನಂತಶಯನ

ಹೊಸದಿಗಂತ ವರದಿ,ಕಾಸರಗೋಡು:

ಕೊಡಗು ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ವತಿಯಿಂದ 2019-20ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ಶೇ.100ಕ್ಕೆ ನೂರು ಫಲಿಂತಾಂಶ ಪಡೆದ ಕಾಲೇಜುಗಳಿಗೆ ಮತ್ತು ರಾಷ್ಟ್ರ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿ ಬಹುಮಾನ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಿತು.

ನಗರದ ಪದವಿ ಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ನಡೆದ ಸಮಾರಂಭವನ್ನು ಉದ್ಘಾಟಿಸಿದ ಪೊನ್ನಂಪೇಟೆ ರಾಮಕೃಷ್ಣ ಶಾರದಾಶ್ರಮದ ಅಧ್ಯಕ್ಷ ಸ್ವಾಮಿ ಬೋಧಸ್ವರೂಪಾನಂದಜೀ ಮಹಾರಾಜ್ ಅವರು, ಬಾಹುಬಲ, ಬುದ್ಧಿಬಲ, ಆತ್ಮಬಲ ಎಂಬ ವಿಚಾರವಾಗಿ ವಿದ್ಯಾರ್ಥಿಗಳಿಗೆ ನೈತಿಕ ಮೌಲ್ಯದ ಬಗ್ಗೆ ತಿಳಿಸಿದರು.

ಪತ್ರಕರ್ತ ಬಿ.ಜಿ.ಅನಂತಶಯನ ಅವರು ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಿ, ವಿದ್ಯಾರ್ಥಿಗಳು ಅಂಕಗಳಿಸುವುದರ ಜೊತೆಗೆ ನಿರ್ದಿಷ್ಟ ಗುರಿ ಹೊಂದಿರಬೇಕು.ಪ್ರಸ್ತುತ ಸಮಾಜದಲ್ಲಿ ಹಲವಾರು ಸಮಸ್ಯೆಗಳು ಇರುವುದನ್ನು ಕಾಣಬಹುದಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವಿಷ್ಣುಮೂರ್ತಿ ಅವರು 2019-20ನೇ ಸಾಲಿನಲ್ಲಿ ಕೊಡಗು ಜಿಲ್ಲೆ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ. ಮುಂದಿನ ದಿನಗಳಲ್ಲಿ ಮೊದಲನೇ ಸ್ಥಾನವನ್ನು ಪಡೆದುಕೊಳ್ಳುವಂತಾಗಬೇಕು ಎಂದು ಪ್ರಾಂಶುಪಾಲರಿಗೆ ಸೂಚಿಸಿದರು.

ಅಖಿಲಾ ಪ್ರಾರ್ಥಿಸಿದರೆ, ಉಪನ್ಯಾಸಕ ನಂದೀಶ್ ನಿರೂಪಿಸಿ, ಬೆಳ್ಳಿಯಪ್ಪ ಅವರು ಸ್ವಾಗತಿಸಿ, ವಂದಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss