Wednesday, July 6, 2022

Latest Posts

ವಿದ್ಯಾರ್ಥಿಗಳಿಗೆ ತೆರೆದ ಪುಸ್ತಕ ಪರೀಕ್ಷೆ ನಡೆಸಲು ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯ ತೀರ್ಮಾನ

ಮೈಸೂರು: ಮೈಸೂರಿನ ಮಾನಸಗಂಗೋತ್ರಿಯಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯವು ತನ್ನ ೨೦೧೯-೨೦ನೇ ಸಾಲಿನ ವಿದ್ಯಾರ್ಥಿಗಳಿಗೆ ತೆರೆದ ಪುಸ್ತಕ ಪರೀಕ್ಷೆ ನಡೆಸಲು ತೀರ್ಮಾನಿಸಿದೆ.

ಮುಕ್ತ ವಿವಿಯಲ್ಲಿ ೨೦೧೯-೨೦ನೇ (ಜುಲೈ ಆವೃತ್ತಿ) ಶೈಕ್ಷಣಿಕ ಸಾಲಿಗೆ ಪ್ರವೇಶಾತಿ ಪಡೆದಿರುವ ವಿದ್ಯಾರ್ಥಿಗಳನ್ನು ಮುಂದಿನ ಶೈಕ್ಷಣಿಕ ಸಾಲಿಗೆ ಉತ್ತೀರ್ಣಗೊಳಿಸಲು ಪರೀಕ್ಷೆಗಳನ್ನು ನಡೆಸುವ ಸಂಬAಧ ಯು.ಜಿ.ಸಿ. ನಿರ್ದೇಶನ ಮತ್ತು ಮಾರ್ಗಸೂಚಿಗನುಗುಣವಾಗಿ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ.

೨೦೧೯-೨೦ನೇ (ಜುಲೈ ಆವೃತ್ತಿ) ಶೈಕ್ಷಣಿಕ ಸಾಲಿನಲ್ಲಿ ಸ್ನಾತಕ, ಸ್ನಾತಕೋತ್ತರ ಕೋರ್ಸ್ಗಳಿಗೆ ಪ್ರವೇಶಾತಿ ಪಡೆದ ಪ್ರಥಮ ಹಾಗೂ ದ್ವಿತೀಯ ಬಿ.ಎ, ಬಿ.ಕಾಂ ಪದವಿಯ ವಿದ್ಯಾರ್ಥಿಗಳು, ಪ್ರಥಮ ಎಂ.ಎ, ಎಂ.ಸಿ.ಜೆ, ಎಂ.ಕಾA ಪದವಿಯ ವಿದ್ಯಾರ್ಥಿಗಳು, ಪ್ರಥಮ ಹಾಗೂ ತೃತೀಯ ಸೆಮಿಸ್ಟರ್ ಎಂಎಸ್ಸಿ ಪದವಿಯ ವಿದ್ಯಾರ್ಥಿಗಳು ಮತ್ತು ದ್ವಿತೀಯ ಸೆಮಿಸ್ಟರ್ ಎಂಬಿಎ ಪದವಿಯ ವಿದ್ಯಾರ್ಥಿಗಳು ರೀಕ್ಷಾ ಶುಲ್ಕ ಪಾವತಿಸಲು ಅಧಿಸೂಚನೆ ಹೊರಡಿಸಲಾಗಿದೆ. ವಿದ್ಯಾರ್ಥಿಗಳು ಕರಾಮುವಿಯ ಅಧಿಕೃತ ವೆಬ್ ಸೈಟ್ ತಿತಿತಿ.ಞsoumಥಿuಡಿu.ಚಿಛಿ.iಟಿ ನಲ್ಲಿ ಅರ್ಜಿ ಭರ್ತಿ ಮಾಡಿ ಪರೀಕ್ಷಾ ಶುಲ್ಕವನ್ನು ಪಾವತಿಸಿದ ನಂತರ ಅರ್ಜಿಯನ್ನು ಡೌನ್ ಲೋಡ್ ಮಾಡಿಕೊಂಡು ಕೇಂದ್ರ ಕಚೇರಿಗೆ ಅಂಚೆ ಮೂಲಕ ರವಾನಿಸಬೇಕು.

ಕೋರ್ಸ್ ಗಳ ಪರೀಕ್ಷಾ ಶುಲ್ಕ ಪಾವತಿಸಲು ದಂಡ ಶುಲ್ಕವಿಲ್ಲದೆ ೨೩-೦೯-೨೦೨೦ ಹಾಗೂ ರೂ. ೨೦೦ ದಂಡ ಶುಲ್ಕದೊಂದಿಗೆ ೩೦.೦೯.೨೦೨೦ ಕಡೆಯ ದಿನಾಂಕವಾಗಿರುತ್ತದೆ. ಹೆಚ್ಚಿನ ಮಾಹಿತಿಗೆ ಪ್ರಾದೇಶಿಕ ನಿರ್ದೇಶಕರು, ಕ.ರಾ.ಮು.ವಿ ಮಹಿಳಾ ಪ್ರಾದೇಶಿಕ ಕೇಂದ್ರ, ಸರಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜು, ೪ನೇ ಮುಖ್ಯರಸ್ತೆ, ೧೩ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-೦೩. ಕಚೇರಿ ದೂರವಾಣಿ ಸಂಖ್ಯೆ:- ೦೮೦ ೨೩೪೪೮೮೧೧, ೯೮೪೪೫೦೬೬೨೯, ೯೬೨೦೩೯೫೫೮೪, ೭೭೬೦೮೪೮೫೬೪ ಸಂಪರ್ಕಿಸಬಹುದು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss