Sunday, June 26, 2022

Latest Posts

ವಿದ್ಯಾರ್ಥಿಗಳೇ ಕೊರೋನಾ ಬಗ್ಗೆ ನಿರ್ಲಕ್ಷ್ಯವಹಿಸಬೇಡಿ: ಸಚಿವ ಎಸ್.ಟಿ.ಸೋಮಶೇಖರ್

ಹೊಸದಿಗಂತ ವರದಿ, ಮೈಸೂರು

ವಿದ್ಯಾರ್ಥಿಗಳೇ ಕೊರೋನಾ ಬಗ್ಗೆ ನಿರ್ಲಕ್ಷ್ಯವಹಿಸಬೇಡಿ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಸಲಹೆ ನೀಡಿದ್ದಾರೆ.

ಕಾಲೇಜುಗಳು ಆರಂಭವಾಗುತ್ತಿವೆ. ಶೈಕ್ಷಣಿಕ ದೃಷ್ಟಿಯಿಂದ ವಿದ್ಯಾರ್ಥಿಗಳಿಗೆ ಶಿಕ್ಷಣ ಅತಿ ಅವಶ್ಯಕ. ಆದರೆ ಕೊರೋನಾ ಕಾರಣದಿಂದ ಈ ಕಠಿಣ ಸಂದರ್ಭದಲ್ಲಿ ಎಚ್ಚರಿಕೆ ವಹಿಸುವುದು ಅಷ್ಟೇ ಅಗತ್ಯವಿದೆ. ಹೀಗಾಗಿ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಗಳನ್ನು ಧರಿಸಲೇಬೇಕು.

ಜೊತೆಗೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಈ ಮಹಾಮಾರಿ ಬಗ್ಗೆ ನಿರ್ಲಕ್ಷ್ಯಬೇಡ. ಈ ಸೋಂಕು ಸಾಂಕ್ರಮಿಕ ಮಾದರಿಯಲ್ಲಿ ಹರಡುವುದರಿಂದ ಒಬ್ಬರಿಗೆ ಬಂದರೆ ಜೊತೆಗಿರುವ ಎಲ್ಲರಿಗೂ ಬರುತ್ತದೆ ಎಂಬ ಅಂಶವನ್ನು ಎಲ್ಲರೂ ಗಮನದಲ್ಲಿ ಇಟ್ಟುಕೊಳ್ಳಬೇಕು. ಈ ಹಿನ್ನೆಲೆಯಲ್ಲಿ ಜಾಗ್ರತೆಯಿಂದ ಇರಿ, ಸುರಕ್ಷಿತವಾಗಿರಿ, ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದು ಕಿವಿ ಮಾತು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss