Wednesday, June 29, 2022

Latest Posts

ವಿದ್ಯಾರ್ಥಿಗಳೇ ನಿಮ್ಮ ಭವಿಷ್ಯ ಉಜ್ವಲವಾಗಲಿ ಎಂದು ಬೋರ್ಡ್’ನಲ್ಲಿ ಬರೆದು ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕ

ದಿಗಂತ ವರದಿ ಚಿಕ್ಕಬಳ್ಳಾಪುರ:

ವಿದ್ಯಾರ್ಥಿಗಳೇ ನಿಮ್ಮ ಭವಿಷ್ಯ ಉಜ್ವಲವಾಗಲಿ ಎಂದು ಬೋರ್ಡ್ ನಲ್ಲಿ ಬರೆದು ಶಿಕ್ಷಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನಲ್ಲಿ ನಡೆದಿದೆ.
ಚಂದ್ರಶೇಖರ್(32) ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕನಾಗಿದ್ದು, ಇವರು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಕನಗಾನಕೊಪ್ಪ ಗ್ರಾಮದ ನಿವಾಸಿ.
ಮೃತ ಚಂದ್ರಶೇಖರ್ ಮಂಚೇನಹಳ್ಳಿಯ ಅನುದಾನಿತ ಆಚಾರ್ಯ ಪ್ರೌಢಶಾಲೆಯ ಶಿಕ್ಷಕಕನಾಗಿ ಕೆಲಸ ಮಾಡುತ್ತಿದ್ದರು. ಶಾಲಾ ಆಡಳಿತ ಮಂಡಳಿಯಿಂದ ಅನುದಾನಿತ ಶಿಕ್ಷಕನಾಗಿ ಅನುಮೋದನೆ ಮಾಡದ ಹಿನ್ನಲೆಯಲ್ಲಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ತನ್ನ ಆತ್ಮಹತ್ಯೆಗೆ ಆಚಾರ್ಯ ಪ್ರೌಢಶಾಲೆ ಆಡಳಿತ ಮಂಡಳಿ ಕಾರಣ ಎಂದು ಚಂದ್ರಶೇಖರ್ ಡೆತ್‍ನೋಟ್ ನಲ್ಲಿ ಬರೆದುಕೊಂಡಿದ್ದಾರೆ. ಅಲ್ಲದೆ ಶಾಲೆಯ ಬೋರ್ಡ್ ನಲ್ಲಿ ವಿದ್ಯಾರ್ಥಿಗಳೇ ನಿಮ್ಮ ಭವಿಷ್ಯ ಉಜ್ವಲವಾಗಲಿ. ಹಾಗೂ ನನ್ನೆಲ್ಲಾ ಪ್ರೀತಿ ಪಾತ್ರರಲ್ಲಿ ಕ್ಷಮೆಯಾಚಿಸುತ್ತಿದ್ದೇನೆ ಎಂದು ಕೂಡ ಬರೆದಿದ್ದಾರೆ.
ಈ ಬಗ್ಗೆ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss