Monday, July 4, 2022

Latest Posts

ವಿದ್ಯುತ್ ದರ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ

ಹೊಸ ದಿಗಂತ ವರದಿ, ಶಿವಮೊಗ್ಗ:

ರಾಜ್ಯ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಲಾಯಿತು.
ಕಳೆದ ಒಂದು ವರ್ಷದಿಂದ ಕೊರೀನಾ ಮಹಾಮಾರಿಯ ಹೊಡೆತಕ್ಕೆ ಸಿಲುಕಿ ಇಡೀ ದೇಶವೇ ತಲ್ಲಣಗೊಂಡಿದೆ. ತೀವ್ರ ಆರ್ಥಿಕ ಕುಸಿತ, ವ್ಯಾಪಕ ನಿರುದ್ಯೋಗ, ರೈತರ ಬವಣೆ, ಮುಚ್ಚುತ್ತಿರುವ ಕೈಗಾರಿಕೆಗಳು, ದುಡಿಕೆ ಇಲ್ಲದೇ ಕಂಗಾಲಾಗಿರುವ ಜನತೆಯ ಚಿತ್ರಣವನ್ನು ದಿನನಿತ್ಯ ಕಾಣಬಹುದಾಗಿದೆ ಎಂದು ತಿಳಿಸಿದರು. ಇಂತಹ ಸಂದರ್ಭದಲ್ಲಿ ಸರ್ಕಾರಗಳು ಸಹಾನುಭೂತಿಯಿಂದ ವರ್ತಿಸಬೇಕೆನ್ನುವುದು ರಾಜಧರ್ಮದ ಆಶಯವಾಗಿದೆ. ವಿಷಮ ಪರಿಸ್ಥಿತಿಗಳಲ್ಲಿ ಸರ್ಕಾರಗಳು ಸೇವೆಯಲ್ಲಿ ರಿಯಾಯ್ತಿ ನೀಡುವುದು ಜನಪರ ಸರ್ಕಾರಗಳ ಆದ್ಯತೆ ಆಗಿರುತ್ತದೆ. ಆದರೆ ಕರ್ನಾಟಕದಲ್ಲಿ ರಿಯಾಯ್ತಿ ನೀಡಬೇಕಾದ ಸರ್ಕಾರವೇ ಈಗ ವಿದ್ಯುತ್ ದರ ಏರಿಕೆ ಮಾಡಿದೆ. ಈ ಮೂಲಕ ಕನ್ನಡ ನಾಡಿನ ಜನರಿಗೆ ರಾಜ್ಯೋತ್ಸವದ ಕೊಡುಗೆ ನೀಡಿದೆ ಎಂದು ವ್ಯಂಗ್ಯವಾಡಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್, ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ಪ್ರಮುಖರಾದ ರಾಮೇಗೌಡ, ಇಕ್ಕೇರಿ ರಮೇಶ್, ಶೇಷಾದ್ರಿ, ರಮೇಶ್ ಹೆಗ್ಡೆ, ಹೆಚ್.ಸಿ ಯೋಗೀಶ್, ಜಿಪಂ ಉಪಾಧ್ಯಕ್ಷೆ ವೇದಾ ವಿಜಯ ಕುಮಾರ್ , ಎನ್.ರಮೇಶ್ ಇನ್ನಿತರರು ಹಾಜರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss