Saturday, July 2, 2022

Latest Posts

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಮೂರು ಅಂಗಡಿಗಳು ಬೆಂಕಿಗಾಹುತಿ

ಹೊಸದಿಗಂತ ವರದಿ, ಕೊಪ್ಪಳ:

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಹಣ್ಣಿನ ಅಂಗಡಿ, ಸೇರಿದಂತೆ ಮೂರು ಅಂಗಡಿಗಳಿಗೆ ಬೆಂಕಿ ತಗುಲಿ ಹೊತ್ತಿ ಉರಿದಿರುವ ಘಟನೆ ಕೊಪ್ಪಳ ನಗರದಲ್ಲಿ ಶನಿವಾರ ಬೆಳಗಿನ ಜಾವ ನಡೆದಿದೆ.

ಇಲ್ಲಿನ ಸರ್ಕಾರಿ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಬಳಿ ಈ ಘಟನೆ ನಡೆದಿದೆ. ನಸುಕಿನಜಾವ ಸುಮಾರು 3.30 ರ ವೇಳೆಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಹಣ್ಣಿನ ಅಂಗಡಿಗೆ ಬೆಂಕಿ ಹೊತ್ತಿಕೊಂಡು ಬಳಿಕ ಮತ್ತೆರಡು ಅಂಗಡಿಗಳಿಗೂ ವ್ಯಾಪಿಸಿದೆ. ಹಣ್ಣಿನ ಅಂಗಡಿ, ಚಪ್ಪಲಿ ಅಂಗಡಿ ಹಾಗೂ ವಾಚ್ ರಿಪೇರಿ ಅಂಗಡಿ ಬೆಂಕಿಗೆ ಆಹುತಿಯಾಗಿವೆ.

ಅಂಗಡಿಗಳಲ್ಲಿದ್ದ ಹಣ್ಣು ಸೇರಿದಂತೆ ಲಕ್ಷಾಂತರ ರೂಪಾಯಿ ವಸ್ತುಗಳು ಸುಟ್ಟು ಕರಕಲಾಗಿವೆ. ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸಿದ್ದಾರೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss