Wednesday, June 29, 2022

Latest Posts

ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಪ್ರತಾಪ್ ಚಂದ್ರ ಶೆಟ್ಟಿ

ಹೊಸದಿಗಂತ ಆನ್ ಲೈನ್ ಡೆಸ್ಕ್:

ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನ ಪ್ರತಾಪ್ ಚಂದ್ರ ಶೆಟ್ಟಿ ಗುರುವಾರ ರಾಜೀನಾಮೆ ನೀಡಿದ್ದಾರೆ.
ಕಳೆದ ಬಾರಿ ಪ್ರತಾಪ್ ಚಂದ್ರ ಶೆಟ್ಟಿ ಅವರನ್ನು ಪದಚ್ಯುತಿಗೊಳಿಸಲೆಂದೇ ವಿಶೇಷ ಅಧಿವೇಶನ ಕರೆಯಲಾಗಿತ್ತು. ಆದರೆ ಪರಿಷತ್‌ನಲ್ಲಿ ಅಹಿತಕರ ಘಟನೆಗಳು ನಡೆದಿದ್ದವು.
ಇದು ರಾಜಕೀಯ ಹಾಗೂ ಸಾಮಾಜಿಕವಾಗಿ ಸಾಕಷ್ಟು ಟೀಕೆಗೆ ಕಾರಣವಾಗಿತ್ತು. ಏತನ್ಮಧ್ಯೆ ಸಭಾಪತಿ ಹಾಗೂ ಉಪಸಭಾಪತ ಸ್ಥಾನಕ್ಕೆ ಬಿಜೆಪಿಗೆ ಬೆಂಬಲ ನೀಡಲು ಜೆಡಿಎಸ್ ಕೂಡ ತಯಾರಿತ್ತು. ಹೀಗಾಗಿ ಸದನದಲ್ಲಿ ಬಹುಮತ ಕಳೆದುಕೊಂಡಿರುವ ಕಾಂಗ್ರೆಸ್ ಸಭಾಪತಿ ಹುದ್ದೆಯನ್ನು ಹೊಂದುವುದು ತಾರ್ಕಿಕವಾಗಿ ಅಸಾಧ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಸಭಾಪತಿ ಹುದ್ದೆಗೆ ಪ್ರತಾಪ್‌ ಚಂದ್ರಶೆಟ್ಟಿ ಗುರುವಾರ ರಾಜೀನಾಮೆ ನೀಡಿದ್ದಾರೆ.
ಸಭಾಪತಿ ಯಾರಾಗಬೇಕೆಂಬ ಬಗ್ಗೆ ಸಿಎಂ ನಾಳೆ ನಿರ್ಧಾರ ಮಾಡಲಿದ್ದು , ಪರಿಷತ್ ಕಲಾಪ 2 ದಿನ ವಿಸ್ತರಿಸಲು ಕೋರಲಾಗಿದೆ. ಉಪಸಭಾಪತಿ ನಾಳೆ ಬಿಎಸಿ ಸಭೆ ಕರೆದು ಕಲಾಪ ವಿಸ್ತರಿಸುವ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಆರ್ ಅಶೋಕ್ ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss