Tuesday, June 28, 2022

Latest Posts

ವಿಧಾನ ಪರಿಷತ್ ನಲ್ಲಿ ಆರೋಗ್ಯ ಕ್ಷೇತ್ರದ ಪ್ರತಿನಿಧಿ ಆಯ್ಕೆಗೆ ಒತ್ತಾಯ

ಹೊಸದಿಗಂತ ವರದಿ, ಶಿವಮೊಗ್ಗ:

ಶಿಕ್ಷಣ ಕ್ಷೇತ್ರದಿಂದ ಇರುವಂತೆ ಆರೋಗ್ಯ ಇಲಾಖೆ ಕ್ಷೇತ್ರದಿಂದಲೂ ವಿಧಾನ ಪರಿಷತ್ ಪ್ರತಿನಿಧಿ ಆಯ್ಕೆಗೆ ಅವಕಾಶ ಕಲ್ಪಿಸಬೇಕು ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ನೌಕರರ ಸಂಘ ಒತ್ತಾಯಿಸಿದೆ.

ಆರೋಗ್ಯ ಇಲಾಖೆ ನೌಕರರ ಸಂಘಟನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಮ.ಸ.ನಂಜುಂಡಸ್ವಾಮಿ ನಗರದಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಶಿಕ್ಷಣ ಇಲಾಖೆ ಸಮಸ್ಯೆಗಳ ಬಗ್ಗೆ ಚರ್ಚಿಸಲು ವಿಧಾನ ಪರಿಷತ್‌ನಲ್ಲಿ ಶಿಕ್ಷಣ ಕ್ಷೇತ್ರದಿಂದ ಆಯ್ಕೆಯಾದ ಸದಸ್ಯರಿದ್ದಾರೆ. ಆದರೆ ಆರೋಗ್ಯ ಇಲಾಖೆ ಸಮಸ್ಯೆ ಬಗ್ಗೆ ಆರೋಗ್ಯ ಸಚಿವರನ್ನು ಬಿಟ್ಟು ಬೇರೆ ಯಾರೂ ಚರ್ಚೆ ನಡೆಸುವರು ಇಲ್ಲ. ಹಾಗಾಗಿ ಆರೋಗ್ಯ ಕ್ಷೇತ್ರದಿಂದಲೂ ವಿಧಾನ ಪರಿಷತ್‌ಗೆ ಸದಸ್ಯರನ್ನು ಆಯ್ಕೆ ಮಾಡಲು ರಾಜ್ಯ ಸರ್ಕಾರ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭ ಡಾ.ಗುಡದಪ್ಪ ಕಸಬಿ, ಪ್ರಭಾಕರ, ಗಿರೀಶ್, ಚಂದ್ರಮತಿ ಹೆಗ್ಡೆ, ನರಸಿಂಹ, ಜೆ.ಶಶಿಕುಮಾರ್ ಪಾಲ್ಗೊಂಡಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss