spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, September 23, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್’ಗೆ ಕೊರೋನಾ ಪಾಸಿಟಿವ್

- Advertisement -Nitte

ಹೊಸ ದಿಗಂತ ವರದಿ, ಮಂಗಳೂರು:

ವಿಧಾನ ಪರಿಷತ್ ಸದಸ್ಯ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕೇರಳ ಹಾಗೂ ರಾಜ್ಯ ಉಪಚುನಾವಣೆ ಹಿನ್ನಲೆಯಲ್ಲಿ ಸುತ್ತಾಟದಲ್ಲಿದ್ದ ಹರೀಶ್ ಕುಮಾರ್ ಅವರಿಗೆ ಏ.12ರಂದು ಆರೋಗ್ಯದಲ್ಲಿ ವ್ಯತ್ಯಯವಾದ ಹಿನ್ನಲೆಯಲ್ಲಿ ಬೀದರ್‌ನಲ್ಲಿ ಕೊರೋನಾ ತಪಾಸಣೆ ನಡೆಸಿ, ಚಿಕಿತ್ಸೆ ಪಡೆದುಕೊಂಡಿದ್ದರು. ಬೀದರ್‌ನ ತಪಾಸಣೆ ಕೊರೋನಾ ನೆಗೆಟಿವ್ ಬಂದಿತ್ತು. ಆ ಬಳಿಕ ದೇಹದಲ್ಲಿ ನಿಶ್ಶಕ್ತಿ ಹಿನ್ನಲೆಯಲ್ಲಿ ಏ.16ರಂದು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.
ಈ ಸಂದರ್ಭ ಮತ್ತೆ ಕೊರೋನಾ ತಪಾಸಣೆ ನಡೆಸಲಾಗಿದ್ದು, ಆ ವರದಿಯಲ್ಲಿ ಪಾಸಿಟಿವ್ ಬಂದಿದೆ.

ಈ ಸಂಬಂಧ ಸುದ್ದಿಗಾರರ ಜತೆ ಮಾತನಾಡಿದ ಹರೀಶ್ ಕುಮಾರ್ ಅವರು ‘ನನಗೆ ದೇಹದಲ್ಲಿ ನಿಶ್ಶಕ್ತಿ ಹೊರತು ಕೊರೋನಾ ಸಂಬಂಧಿತ ಯಾವುದೇ ಗುಣಲಕ್ಷಣಗಳು ಇಲ್ಲ.ಆದರೆ ಕೊರೊನಾ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ’ ಎಂದು ಹೇಳಿದ್ದಾರೆ. ಹರೀಶ್ ಕುಮಾರ್ ಅವರು ಮಾ. 21ರಿಂದ 27ರವರೆಗೆ ಕೇರಳದಲ್ಲಿ ಹಾಗೂ ಮಾ. 30ರಿಂದ ಏ.16ರವರೆಗೆ ಬೀದರ್ ಬಸವ ಕಲ್ಯಾಣದ ಉಪಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss