Wednesday, June 29, 2022

Latest Posts

ವಿಪ್ ಉಲ್ಲಂಘಿಸಿದ ಮೂವರು ಬಿಜೆಪಿ ಸದಸ್ಯರು: ಸದಸ್ಯತ್ವ ರದ್ದಿಗೆ ದೂರು

ಹೊಸ ದಿಗಂತ ವರದಿ, ಕೊಪ್ಪಳ: 

ಜಿಲ್ಲೆಯ ಭಾಗ್ಯನಗರ ಪಟ್ಟಣ ಪಂಚಾಯ್ತಿ ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆಯಲ್ಲಿ ವಿಪ್ ಉಲ್ಲಂಘಿಸಿದ ಮೂವರು ಬಿಜೆಪಿ ಸದಸ್ಯರ ಸದಸ್ಯತ್ವ ರದ್ದುಪಡಿಸುವಂತೆ ಬಿಜೆಪಿ ದೂರು ಸಲ್ಲಿಸಿದೆ.
ಭಾಗ್ಯನಗರ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗೆ ಇಂದು ಬಿಜೆಪಿ ಮುಖಂಡರು ದೂರು ಸಲ್ಲಿಸಿದ್ದಾರೆ. ಕಳೆದ ನವೆಂಬರ್ 6 ರಂದು ನಡೆದ ಭಾಗ್ಯನಗರ ಪಟ್ಟಣ ಪಂಚಾಯ್ತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಸದಸ್ಯರಾದ ಸುರೇಶ್ ದರಗದಕಟ್ಟಿ, ನೇಮಣ್ಣ ಬನ್ನಿಕಲ್ಲಪ್ಪ ಬಿದರೂರ್ ಹಾಗೂ ಶೇಖಮ್ಮ ಸೋಮಣ್ಣ ದೇವರಮನಿ ಅವರ ವಿಪ್ ಉಲ್ಲಂಘಿಸಿದ್ದಾರೆ. ಈ ಮೂವರು ಸದಸ್ಯರ ವಿರುದ್ದ ಪಕ್ಷಾಂತರ ನಿಷೇಧ ಕಾಯ್ದೆಯನ್ವಯ ಕ್ರಮ ಕೈಗೊಂಡು ಅವರ ಸದಸ್ಯತ್ವ ರದ್ದು ಮಾಡಬೇಕೆಂದು ಪಟ್ಟಣ ಪಂಚಾಯಿತಿಯ ಮುಖ್ಯ ಅಧಿಕಾರಿಗೆ ಇಂದು ಬಿಜೆಪಿ ಮುಖಂಡರು ದೂರು ನೀಡಿದ್ದಾರೆ.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಹಾಗೂ ನ್ಯಾಯವಾದಿ ರಾಜು ಬಾಕಳೆ, ಕೊಪ್ಪಳ ಬಿಜೆಪಿ ಗ್ರಾಮೀಣ ಮಂಡಲದ ಅಧ್ಯಕ್ಷ ಪ್ರದೀಪ ಹಿಟ್ನಾಳ, ನ್ಯಾಯವಾದಿ ಶಂಕರ ಸಿಂಗ್ರಿ, ಗ್ರಾಮೀಣ ಮಂಡಲ ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಭೀಮಣ್ಣ ಹೀರೆಮನಿ ಹಾಜರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss