ಮಂಗಳೂರು: ತೆರಿಗೆ ವಂಚಿಸಿ ದುಬೈನಿಂದ ಏರ್ ಇಂಡಿಯಾ ವಿಮಾನದ ಮೂಲಕ ಬರೋಬ್ಬರಿ ರೂ.೨೫ ಲಕ್ಷ ಮೌಲ್ಯದ ಚಿನ್ನ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಕಾಸರಗೋಡಿನ ಸುಮೇಶ್ ಬಂಧಿತ. ಈತ ಯಾರಿಗೂ ಅನುಮಾನ ಬಾರದಂತೆ ಇಲೆಕ್ಟ್ರಿಕ್ ಕುಕ್ಕರ್ನೊಳಗೆ ಚಿನ್ನವನ್ನು ಅಡಗಿಸಿಟ್ಟು ಸಾಗಿಸುತ್ತಿದ್ದ. ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆ ತಪಾಸಣೆ ವೇಳೆ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದುದು ಬಯಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿಯಿಂದ ರೂ.೨೫,೪೫,೯೨೦ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.