Saturday, January 16, 2021

Latest Posts

ವಿಮಾನ ದುರಂತ| ಮೃತ ಕುಟುಂಬಗಳಿಗೆ 10 ಲಕ್ಷ ರೂ ಪರಿಹಾರ ಘೋಷಣೆ: ಸಚಿವ ಹರ್ದೀಪ್ ಸಿಂಗ್ ಪುರಿ

ಕೋಯಿಕೋಡ್: ಕೇರಳ ವಿಮಾನ ನಿಲ್ದಾಣದಲ್ಲಿ ನಡೆದ ವಿಮಾನ ದುರಂತದಲ್ಲಿ ಮೃತಪಟ್ಟ ಕುಟುಂಬಗಳಿಗೆ ತಲಾ 10 ಲಕ್ಷ ರೂ ಪರಿಹಾರ ನೀಡುವುದಾಗಿ ಕೇಂದ್ರ ನಾಗರೀಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.

ನಿನ್ನೆ ಸಂಜೆ ನಡೆದ ಭೀಕರ ಅಪಘಾತದ ನಂತರ ಸ್ಥಿತಿ ಮತ್ತು ಪರಿಹಾರ ಕ್ರಮಗಳ ಅನುಷ್ಠಾನವನ್ನು ತೆಗೆದುಕೊಳ್ಳಲು ಇಂದು ಸ್ಥಳಕ್ಕೆ ಭೇಟಿ ನೀಡಿದ ಕೇಂದ್ರ ಸಚಿಚ ಪುರಿ ಅವರು ವಿಮಾನದ ಡಿಜಿಟಲ್ ಫ್ಲೈಟ್ ಡಾಟಾ ರೆಕಾರ್ಡರ್ ಮತ್ತು ಕಾಕ್‌ಪಿಟ್ ವಾಯ್ಸ್ ರೆಕಾರ್ಡರ್ ಅನ್ನು ಪಡೆಯಲಾಗಿದ್ದು, ಎಎಐಬಿ ತನಿಖೆ ನಡೆಸುತ್ತಿದೆ ಎಂದರು.

ಮಧ್ಯಂತರ ಪರಿಹಾರವಾಗಿ, ಮೃತಪಟ್ಟ ಪ್ರತಿಯೊಬ್ಬ ವ್ಯಕ್ತಿಯ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ನೀಡಲಿದ್ದು, ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರೂ. ಮತ್ತು ಸಣ್ಣಪುಟ್ಟ ಗಾಯಗಳಿಂದ ಬಳಲುತ್ತಿರುವವರಿಗೆ 50,000 ರೂ ಗಳ ಪರಿಹಾರ ಘೋಷಿಸಿದರು.

ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಹಿರಿಯ ನಾಗರಿಕ ವಿಮಾನಯಾನ ಅಧಿಕಾರಿಗಳು ಮತ್ತು ವೃತ್ತಿಪರರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.

ವಿಮಾನದಲ್ಲಿ 190 ಜನರು ಪ್ರಯಾಣ ನಡೆಸುತ್ತಿದ್ದು, ಅವರಲ್ಲಿ 18 ಜನರು ಪ್ರಾಣ ಕಳೆದುಕೊಂಡಿದ್ದಾರೆ. 149 ಜನರನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಅದರಲ್ಲಿ 23 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ತಿಳಿಸಿದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss

error: Content is protected !!