Tuesday, June 28, 2022

Latest Posts

ವಿಮಾನ ನಿಲ್ದಾಣಗಳ ಹೆಸರು ನಾಮಕರಣದ ಅಧಿಕಾರ ರಾಜ್ಯ ಸರಕಾರಕ್ಕೆ ಇಲ್ಲ: ಹರೀಶ್ ಕುಮಾರ್

ದಿಗಂತ ವರದಿ, ಮಂಗಳೂರು:

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ರಾಜ್ಯದ ಇತರೆ ವಿಮಾನ ನಿಲ್ದಾಣಗಳ ಹೆಸರು ನಾಮಕರಣಕ್ಕೆ ರಾಜ್ಯ ಸರ್ಕಾರಕ್ಕೆ ಅಧಿಕಾರ ಇಲ್ಲ ಎಂದು ಸರ್ಕಾರದ ಮುಖ್ಯಕಾರ್ಯದರ್ಶಿ ಸ್ಪಷ್ಟಪಡಿಸಿದ್ದಾರೆ. ಹಾಗಿರುವಾಗ ರಾಜ್ಯ ಕ್ಯಾಬಿನೆಟ್‌ನಲ್ಲಿ ಒಪ್ಪಿಗೆ ಸೂಚಿಸಿ ಕೇಂದ್ರ ಸರ್ಕಾರಕ್ಕೆ ಹೆಸರು ಕಳುಹಿಸಬೇಕು. ಇಲ್ಲವೇ ಸಂಸದರು ಲೋಕಸಭೆಯಲ್ಲಿ ಪ್ರಸ್ತಾಪಿಸಬೇಕು. ಆದರೆ ಬಿಜೆಪಿ ಈ ಕೆಲಸವನ್ನು ಮಾಡದೆ ಜಾತಿ ಹೆಸರಿನಲ್ಲಿ ರಾಜಕೀಯ ನಡೆಸುತ್ತಿದೆ ವಿಧಾನ ಪರಿಷತ್ ಸದಸ್ಯರೂ ಆಗಿರುವ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಟೀಕಿಸಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರಾವಳಿಯ ವೀರ ಪುರುಷರಾದ ಕೋಟಿ ಚೆನ್ನಯರ ಹೆಸರು ಇರಿಸುವ ಬಗ್ಗೆ 2012ರಲ್ಲೇ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾಗಿ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ. ಇದು ನಿಜವೇ ಆಗಿದ್ದರೆ, ಪ್ರಸ್ತಾವನೆ ಯಾವ ಹಂತದಲ್ಲಿದೆ ಎಂಬ ಬಗ್ಗೆ ದಾಖಲೆ ನೀಡಲಿ ಎಂದು ಹರೀಶ್ ಕುಮಾರ್ ಒತ್ತಾಯಿಸಿದರು.
ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರು ಇರಿಸುವ ಬಗ್ಗೆ ಸ್ಥಳೀಯ ಮಳವೂರು ಗ್ರಾಮ ಪಂಚಾಯ್ತಿ ನಿರ್ಣಯಿಸಿದ್ದು, ಅದನ್ನು ಜಿಲ್ಲಾ ಪಂಚಾಯತ್‌ಗೆ ಕಳುಹಿಸಿಕೊಟ್ಟಿದೆ. ಅಲ್ಲಿಂದ ರಾಜ್ಯ ಸರ್ಕಾರಕ್ಕೆ ತೀರ್ಮಾನವನ್ನು ಕಳುಹಿಸಲಾಗಿದೆ. ಆದರೆ ರಾಜ್ಯ ಸರ್ಕಾರ ಇನ್ನೂ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿಲ್ಲ ಎಂದು ಅವರು ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss